ಅನ್ಯ ಪಕ್ಷಗಳ ಆಮಿಷಕ್ಕೆ ಬಲಿಯಾಗಬೇಡಿ: ಎಂ.ಪಿ. ರವೀಂದ್ರ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮಾ. 16
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಸ್ಥಳೀಯ ಸಂಸ್ಥೆಗಳ ಸದಸ್ಯರು ಪಕ್ಷ ನಿಷ್ಠೆ ತೋರುವ ಮೂಲಕ ಅನ್ಯ ಪಕ್ಷಗಳ ಆಮಿಷಗಳಿಗೆ ಬಲಿಯಾಗದೇ ಜನಪರ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ ನೂತನ ಸದಸ್ಯರಿಗೆ ಕಿವಿಮಾತು ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನೂತನ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಬಹುತಮ ನೀಡುವ ಮೂಲಕ ಭ್ರಷ್ಟ ಬಿಜೆಪಿಗೆ ಮತ್ತು ಇತರೆ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ನೂತನ ಸದಸ್ಯರು ತಮ್ಮ ವಾರ್ಡ್‌ಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಅವಕಾಶ ಕಲ್ಪಿಸಬೇಕು ಎಂದರು.
ಕಾಂಗ್ರೆಸ್ ಮುಖಂಡ ದೀಪಕ್‌ಕುಮಾರ್ ಸಿಂಗ್ ಮಾತನಾಡಿ, ನಗರದ ಕಾಂಗ್ರೆಸ್ ಸದಸ್ಯರನ್ನು ಆಯ್ಕೆ ಮಾಡಿದ ಪ್ರತಿ ವಾರ್ಡ್‌ಗಳಲ್ಲಿ 5 ಜನ ಹಿರಿಯರ ಸಮಿತಿಯನ್ನು ರಚಿಸಿ ವಾರ್ಡ್‌ಗಳ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಸದಸ್ಯರು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಮಾರಾಟವಾಗದೆ ಮಾದರಿ ನಗರವನ್ನಾಗಿ ರೂಪಿಸುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಜಿ. ಗುರುದತ್, ಕಾಂಗ್ರೆಸ್ ಮುಖಂಡರಾದ ಜಿ.ಕೆ. ಹನುಮಂತಪ್ಪ, ಬಿ.ಕಾಂ. ಮಾಬುಸಾಬ್, ತಾರಿಹಳ್ಳಿ ಶಿವಮೂರ್ತಿ, ಡಿ. ವೆಂಕಟರಮಣ, ಅಬಿದ್ ಹುಸೇನ್, ಫಾಹೀಂ ಭಾಷ, ಭಾಗ್ಯಲಕ್ಷ್ಮೀ ಬರಾಡೆ, ಕೊಟ್ಟೂರಿನ ಹರ್ಷವರ್ಧನ್, ಸಿರುಗುಪ್ಪದ ನಾಗರಾಜ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

