ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಪಣ
ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಮಾ. 16
ತೀರಾ ಹಿಂದುಳಿದ ಕೂಡ್ಲಿಗಿ ತಾಲೂಕನ್ನು ಕೇವಲ 5 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಪಡಿಸಿದ್ದು, ಕ್ಷೇತ್ರದಲ್ಲಿನ ಎಲ್ಲ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಮೂಲಕ ರಸ್ತೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ಶಾಸಕ ಬಿ. ನಾಗೇಂದ್ರ ತಿಳಿಸಿದರು.
ಅವರು ತಾಲೂಕಿನ ಬೋರಾಗಟ್ಟೆಯಲ್ಲಿ ನಡೆದ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ತಾಲೂಕಿನ ಗಡಿಭಾಗದ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಿ ಅಲ್ಲಿನ ಗ್ರಾಮಗಳ ಜನತೆಗೆ ಅನುಕೂಲ ಕಲ್ಪಿಸಲಾಗಿದೆ. ಕ್ಷೇತ್ರದ 217 ಹಳ್ಳಿಗಳಲ್ಲಿ ಕುಡಿವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದೆ. ಅದರಿಂದ ಜನತೆಗೆ ಅನೇಕ ಸಮಸ್ಯೆಗಳು ಉಂಟಾಗಿವೆ. ಅದನ್ನರಿತು ಶುದ್ಧ ಕುಡಿವ ನೀರು ಸರಬರಾಜು ಮಾಡಲು ಯೋಜನೆ ರೂಪಿಸಿದ್ದು, ರು. 200 ಕೋಟಿ ಅಂದಾಜು ಪಟ್ಟಿ ತಯಾರಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದು ಮೊದಲ ಕಂತಿನ ಹಣ ಬಿಡುಗಡೆಯಾಗಿದೆ ಎಂದರು.
ರು. 11 ಕೋಟಿ ವೆಚ್ಚದ ಕಾಮಗಾರಿ
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ವಿರುಪಾಪುರ- ಎ. ಸೂರವ್ವನಹಳ್ಳಿ, ಚಿಕ್ಕ ಉಜ್ಜಿನಿಯಿಂದ ಬೆನಕನಹಳ್ಳಿ-ಗಾಣಾಗಟ್ಟೆ, ಕಸಾಪುರ-ಹುರುಡಿಹಳ್ಳಿ, ತಿಪ್ಪೇಹಳ್ಳಿಯಿಂದ ಪೂಜಾರಹಳ್ಳಿ-ಕೆ.ಬಿ.ಕೆ. ಹಟ್ಟಿ ಸೇರಿದಂತೆ ಒಟ್ಟು ರು. 11 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಮಾಡಲು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಟ್ಟೂರು ಎಪಿಎಂಸಿ ಅಧ್ಯಕ್ಷ ಜೆ.ಸಿ. ಶಶಿಧರ, ಜಿಪಂ ಸದಸ್ಯೆ ಮೀನಾಕ್ಷಮ್ಮ, ತಾಪಂ ಅಧ್ಯಕ್ಷೆ ಪ್ರಮೀಳಾ ಚಿದಾನಂದಗೌಡ, ಸದಸ್ಯೆ ವಿಶಾಲಾಕ್ಷಿ ರಾಜಣ್ಣ, ಪಿಎಂಜೆಎಸ್ವೈ ಅಭಿಯಂತರ ಕೃಷ್ಣ ಕಟ್ಟೇಮನೆ, ಹರೀಶ್, ಗುತ್ತಿಗೆದಾರ ನಾಗರಕಟ್ಟೆ ಕೊಟ್ರೇಶ್, ದೇವದಾಸ್, ವಕೀಲ ಎಂ.ಎಂ.ಜೆ. ಸ್ವರೂಪಾನಂದ, ಮೊರಬ ಶಿವಣ್ಣ, ಗ್ರಾಪಂ ಅಧ್ಯಕ್ಷ ಮೊರಬ ವೀರಣ್ಣ, ಸುನೀಲ್ ಪಾಟೀಲ್, ಎಪಿಎಂಸಿ ಸದಸ್ಯ ಕೊಟ್ರೇಶಪ್ಪ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

