ಸುದ್ದಿ ಸಂಕ್ಷೇಪ
ನಾಳೆ ರಾಯರ ವರ್ಧಂತಿ
ಬಳ್ಳಾರಿ: ತೇರು ಬೀದಿಯಲ್ಲಿ ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀರಾಘವೇಂದ್ರ ಸ್ವಾಮಿಗಳ ವೃತ್ತಿಕಾ ಬೃಂದಾವನದಲ್ಲಿ ಮಾ. 19ರಂದು ರಾಯರ ವರ್ಧಂತಿ ಹಮ್ಮಿಕೊಳ್ಳಲಾಗಿದೆ. ಎಂದು ಮಠದ ವ್ಯವಸ್ಥಾಪಕ ಕೃಷ್ಣಮೂರ್ತಿ ಜೋಷಿ ತಿಳಿಸಿದ್ದಾರೆ. ವರ್ಧಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ವಿಶೇಷ ಪೂಜೆ ಮಾಡಿಸುವ ರಾಯರ ಭಕ್ತರು ಶ್ರೀಮಠದ ದೂ.ಸಂ-08392-271292ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧೈರ್ಯ ಕಳೆದುಕೊಳ್ಳಬೇಡಿ: ನಾರಾ ರೆಡ್ಡಿ
ಬಳ್ಳಾರಿ: ಸೋಲು ಗೆಲುವಿನ ಮೆಟ್ಟಿಲಾಗಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಸೋತಿದ್ದೇವೆ ಎಂದು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಇದು ಗೆಲುವಿನ ಮೆಟ್ಟಿಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎನ್. ಸೂರ್ಯನಾರಾಯಣ ರೆಡ್ಡಿ ಹೇಳಿದರು. ನಗರದ ತಮ್ಮ ಕಚೇರಿಯಲ್ಲಿ ಪಾಲಿಕೆಯಲ್ಲಿ ಪರಾಜಿತಗೊಂಡಿರುವ ಪಕ್ಷದ ಅಭ್ಯರ್ಥಿಗಳ, ಕಾರ್ಯಕರ್ತರ, ಮುಖಂಡರ ಸಭೆ ನಡೆಸಿದ ಅವರು, ಸೋಲು ಯಾರಿಗೂ ಶಾಶ್ವತ ಅಲ್ಲ. ಸೋತಾಗ ಮಾತ್ರ ಗೆಲುವು ಸಾಧ್ಯವಾಗುತ್ತದೆ. ಇಂದು ಸೋತರೆ, ನಾಳೆ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸ ಪ್ರತಿಯೊಬ್ಬರೂ ಹೊಂದಬೇಕು. ರಾಜಕೀಯದಲ್ಲಿ ಪ್ರತಿಯೊಬ್ಬರೂ ಇಂತಹ ಮನೋಭಾವ ಹೊಂದಿರಬೇಕು. ಸೋತ ಮಾತ್ರಕ್ಕೆ ಜನರ ಸಮಸ್ಯೆಗಳನ್ನು ಆಲಿಸುವುದನ್ನು ಬಿಡಬಾರದು. ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕಾರ್ಯಕರ್ತರಿಗೆ, ಮುಖಂಡರಿಗೆ ಕಿವಿ ಮಾತು ಹೇಳಿದರು. ಸಭೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

