ಬಳ್ಳಾರಿ

ಮಹಿಳೆಯರು ಕಾನೂನು ಬಳಸಿಕೊಳ್ಳಿ

Published On :

ಹೊಸಪೇಟೆ: ಮಹಿಳೆಯರಿಗೆ ನೀಡಿರುವ ಕಾನೂನುಗಳನ್ನು ಸಮರ್ಥವಾಗಿ ಬಳಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಥಿಯೋಸಾಫಿಕಲ್ ಮಹಿಳಾ ಕಾಲೇಜಿನಲ್ಲಿ ಹಂಪಿ ಕನ್ನಡ ವಿವಿ ಮಹಿಳಾ ಅಧ್ಯಯನ ಕೇಂದ್ರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ನಡೆದ ಮಹಿಳಾ ಕಾನೂನುಗಳ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಸಂದರ್ಭದಲ್ಲಿ ಟಿವಿ, ಮೊಬೈಲ್‌ಗಳಿಗೆ ಮಾರು ಹೋಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದರು. ಸಿವಿಲ್ ನ್ಯಾಯಾಧೀಶ ಹೊಸಮನಿ ಪುಂಡಲೀಕ ಮಾತನಾಡಿದರು.  ಇಂದಿನ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕಾದ ಅಗತ್ಯತೆ ಇದೆ. ವಿದ್ಯಾರ್ಥಿಗಳು   ಉತ್ತಮ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳುವ ಮೂಲಕ ವಿವೇಕ, ಶ್ರದ್ಧೆ, ಸಾಮಾಜಿಕ ಹೊಣೆಯನ್ನು ಅರಿತು ಮುನ್ನಡೆಯಬೇಕೆಂದರು.
ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಕಾರ್ಯದರ್ಶಿ ಅಶೋಕ್ ಜೀರೆ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶ ಕೃಷ್ಣಪ್ರಸಾದ್ ರಾವ್ ಕಲ್ಮಾಡಿ ಮತ್ತು ವಕೀಲರ ಸಂಘದ ಅಧ್ಯಕ್ಷ ಕೆ. ರತ್ನಾಕರರಾವ್, ಹಂಪಿ ಕನ್ನಡ ವಿವಿ ಮಹಿಳಾ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ಶಿವಾನಂದ ವಿರಕ್ತಮಠ, ಥಿಯೋಸಾಫಿಕಲ್ ಸೊಸೈಟಿ ಉಪಾಧ್ಯಕ್ಷ ವಿ. ಲಿಂಗಪ್ಪ, ಪ್ರಾಚಾರ್ಯ ಯು. ರಾಘವೇಂದ್ರರಾವ್ ಇದ್ದರು. ಡಾ. ಸುರೇಂದ್ರ ಮಾನೇಮಿ ಸ್ವಾಗತಿಸಿ,ಡಾ.ಬಿ. ಮಂಜುಳಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.