ಡಿಸಿಯಿಂದ ನಿಯಮ ಉಲ್ಲಂಘನೆ: ಶ್ರೀರಾಮುಲು
ಬಳ್ಳಾರಿ: ರಾಷ್ಟ್ರೀಯ ನಗರ ವ್ಯಾಪಾರಿಗಳ ನೀತಿ-12ರ ಪ್ರಕಾರ ರಸ್ತೆ ಬದಿಯ ವ್ಯಾಪಾರಿಗಳಿಗೆ ಮುನ್ಸೂಚನೆ ನೀಡಿ, ತೆರವುಗೊಳಿಸಬೇಕು, ಆದರೆ ಜಿಲ್ಲಾಧಿಕಾರಿಗಳು ಈ ನೀತಿಯನ್ನು ಉಲ್ಲಂಘಿಸಿದ್ದು, ಈ ಕುರಿತಾಗಿ ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗುತ್ತದೆ ಎಂದು ಬಿಎಸ್ಸಾರ್ ಸಂಸ್ಥಾಪಕ ಅಧ್ಯಕ್ಷ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಗರದ ಬಿಎಸ್ಸಾರ್ ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ನಗರ ವ್ಯಾಪಾರಿಗಳ ನೀತಿಯಂತೆ ಜಿಲ್ಲಾಧಿಕಾರಿ ಬಿಸ್ವಾಸ್ ಪಾಲನೆ ಮಾಡಿಲ್ಲ, ಏಕಾಏಕಿ ತೆರವುಗೊಳಿಸಿರುವುದು ಸರಿಯಾದ ಕ್ರಮವಲ್ಲ. ಇದರಿಂದಾಗಿ ಬೀದಿ ಬದಿಯ ವ್ಯಾಪಾರಿಗಳಿಗೆ ತೊಂದರೆಯಾಗತ್ತದೆ. ಈ ನಿಟ್ಟಿನಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಲಾಗುತ್ತದೆ ಎಂದರು. ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೀದಿ ಬದಿಯ ವ್ಯಾಪಾರಸ್ಥರನ್ನು ತೆರವುಗೊಳಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ವ್ಯಾಪಾರಿಗಳ ನೀತಿಯನ್ನು ಅನುಸರಿಸಬೇಕು. 30 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಪರ್ಯಾಯ ವ್ಯವಸ್ಥೆ ಕಲ್ಪಿಸಿ, ತೆರವು ಮಾಡಬೇಕಾಗುತ್ತದೆ. ಆದರೆ ಜಿಲ್ಲಾಧಿಕಾರಿಗಳು ಹಿಟ್ಲರ್ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೋರ್ಟ್ ಆದೇಶ ಕುರಿತಾಗಿ ಸೌಜನ್ಯಕ್ಕಾದರೂ ಪ್ರತಿಭಟನೆ ಸಂದರ್ಭದಲ್ಲಿ ಚರ್ಚೆ ಮಾಡಿಲ್ಲ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ರುದ್ರಗೌಡ, ಮುರಳಿಕೃಷ್ಣ, ವಿಜಯಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

