ಇಂದು ಮಹಿಳಾ ದಿನಾಚರಣೆ
ಹೊಸಪೇಟೆ: ಇಲ್ಲಿನ ಸಖಿ ಬಳಗದಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ನಗರದ ಲಾಲ್ ಬಹೂದ್ದೂರ್ ಶಾಸ್ತ್ರೀ ನಗರದ ಬಲಿಜ ಭವನದಲ್ಲಿ ಮಾ. 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಬೆಂಗಳೂರಿನ ಲೇಖಕಿ ದು. ಸರಸ್ವತಿ ಉದ್ಘಾಟಿಸುವರು. ವಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಡಾ.ಸುನಂದಮ್ಮ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸ್ತ್ರೀರೋಗ ತಜ್ಞೆ ಡಾ.ರಾಣಿ ಕರೂರು, ನಗರಸಭಾ ಸದಸ್ಯೆ ನೂರ್ ಜಹಾನ್, ಸಹಕಾರ ಇಲಾಖೆಯ ಅಸಿಸ್ಟಂಟ್ ರಿಜಿಸ್ಟ್ರಾರ್ ಡಾ.ಜಿ. ಉಮೇಶ್, ಸಖಿ ಟ್ರಸ್ಟ್ನ ನಿರ್ದೇಶಕಿ ಡಾ.ಎಂ. ಭಾಗ್ಯಲಕ್ಷ್ಮಿ ಭಾಗವಹಿಸುವರು.
ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ
ಹೂವಿನಹಡಗಲಿ: ವಿವಾಹಿತ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಗ್ರಾಮದ ಗಂಗಮ್ಮ ಪಾಲಾಕ್ಷಪ್ಪ (20) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಈಕೆಯ ಪತಿ ಮತ್ತು ಮಾವ ಕಿರುಕುಳ ನೀಡಿ ಅತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಗಂಗಮ್ಮನನ್ನು ಒಂದು ವರ್ಷದ ಹಿಂದೆ ಅದೇ ಗ್ರಾಮದ ಹತ್ತಿರದ ಸಂಬಂಧಿ ಪಾಲಾಕ್ಷಪ್ಪನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಶನಿವಾರ ಬೆಳಗ್ಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡಿದ್ದಾಳೆ. ಸ್ಥಳಕ್ಕೆ ಡಿವೈಎಸ್ಪಿ ಡಿ. ನಾಗರಾಜ, ತಹಸೀಲ್ದಾರ್ ವಿಜಯಕುಮಾರ, ಸಿಪಿಐ ಶ್ರೀಕಾಂತ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿ: 3 ಅಂಗಡಿ ಭಸ್ಮ
ಕೊಟ್ಟೂರು: ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ 3 ಶೆಡ್ಡುಗಳು ಸಂಪೂರ್ಣವಾಗಿ ಭಸ್ಮಗೊಂಡು ಸುಮಾರು ರು. 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಲ್ಲಿನ ತೇರು ಬೀದಿಯಲ್ಲಿ ಶನಿವಾರ ಸಂಜೆ 7.45ರ ಸುಮಾರಿಗೆ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಪ್ಪಲಿ ಅಂಗಡಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ರಮೇಣ ಪಕ್ಕದ ಕಾಯಿಪಲ್ಲೆ ಅಂಗಡಿ ಹಾಗೂ ಹೊಟೇಲ್ಗೂ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ಕೂಡ್ಲಿಗಿ ಹಾಗೂ ಕೊಟ್ಟೂರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕೊಟ್ಟೂರು ಠಾಣಾ ಪಿಎಸ್ಐ ಗುರುರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

