ಕಾಂಗ್ರೆಸ್ ಅಭ್ಯರ್ಥಿ ಗೆಲವಿಗೆ ಶ್ರಮಿಸಿ
ಹಗರಿಬೊಮ್ಮನಹಳ್ಳಿ: ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ಮಿತಿಮೀರಿದ ಭ್ರಷ್ಟಚಾರದಿಂದ ರಾಜ್ಯದ ಜನತೆ ಸಂಪೂರ್ಣ ರೋಸಿಹೋಗಿದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಎಲ್ಲ ಅವಕಾಶಗಳು ಸ್ಪಷ್ಟವಾಗಿದ್ದು ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ ಪಕ್ಷದ ಗೆಲವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಕರೆ ನೀಡಿದರು.
ಶುಕ್ರವಾರ ಸಂಜೆ ತಾಲೂಕಿನ ಚಿಂತ್ರಪಳ್ಳಿ ಗ್ರಾಮದಲ್ಲಿರುವ ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಫಾರಂ ಹೌಸ್ನಲ್ಲಿ ಕಾರ್ಯಕರ್ತರ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಟಿಕೆಟ್ ಹಂಚಿಕೆಯಲ್ಲಿ ಪ್ರಾದೇಶಿಕ ಸಮತೋಲನೆ, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಹಾಗೂ ಸಾಮಾಜಿಕ ನ್ಯಾಯ ಪರಿಪಾಲನೆ ಮಾಡಲಾಗುವುದು. ಗೆಲ್ಲುವಂಥ ಅಭ್ಯರ್ಥಿಗಳನ್ನು ಸೂಚಿಸುವ ಮೂಲಕ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುಂತೆ ಮಾಡುವುದು ನಿಮ್ಮೆಲ್ಲರ ಮೇಲಿರುವ ಹೊಣೆಗಾರಿಕೆ ಎಂದರು.
ಕಾಂಗ್ರೆಸ್ ಪಕ್ಷದಿಂದ ಮಾತ್ರ ವಾಲ್ಮೀಕಿ ಜನಾಂಗದ ಅಭಿವೃದ್ಧಿ ಸಾಧ್ಯ. ಹೀಗಾಗಿ ದೂರ ಸರಿದಿರುವ ಸಮಾಜದ ಮುಖಂಡರು ಮತ್ತೆ ಪಕ್ಷಕ್ಕೆ ಮರಳಬೇಕು. ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ. ನಿಮ್ಮ ಮೇಲೆ ಪಕ್ಷ ಒಪ್ಪಿಸಿರುವ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿ, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ಗೆಲವಿನ ಅಭಿಯಾನ ಆರಂಭಿಸುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ, ಹಿರಿಯ ಮುಖಂಡರಾದ ಹೆಗ್ಡಾಳ್ ರಾಮಣ್ಣ, ಬಿ.ಪಿ. ಅಡ್ನೂರು, ಜೆ.ಎನ್. ಗಣೇಶ್, ಎನ್. ಮುದ್ದಪ್ಪ, ಕೆಪಿಸಿಸಿ ಸದಸ್ಯ ಪಿ.ಎಚ್. ದೊಡ್ಡರಾಮಣ್ಣ, ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಜನ್ನು, ಗುಜ್ಜಲ ರಘು, ಎಚ್.ಪಿ. ಶಿವಶಂಕರಗೌಡ, ಬಾಲಕೃಷ್ಣಬಾಬು, ಎಚ್. ಸತ್ಯನಾರಾಯಣ, ಸಿ. ಬಸವರಾಜ, ಯುವಕಾಂಗ್ರೆಸ್ ಅಧ್ಯಕ್ಷ ಸಿ. ಶೇಖರ, ಪೋತಲಕಟ್ಟಿ ದೇವೆಂದ್ರಪ್ಪ, ಎಚ್.ಎಂ. ವೀರಭದ್ರಯ್ಯ, ಎಚ್. ನೇತಾಜಿಗೌಡ, ತಾಪಂ ಸದಸ್ಯ ಎಂ.ಎಂ. ಶಿವಕುಮಾರ ಭಾಗವಹಿಸಿದ್ದರು. ಯುವ ಕಾಂಗ್ರೆಸ್ ಉಪಾಧ್ಯಕ್ಷ ತಟ್ಟಿ ರಾಘವೇಂದ್ರ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

