ಮತ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಮನವಿ
ಬಳ್ಳಾರಿ: ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ತಮ್ಮ ಹೆಸರುಗಳನ್ನು ನೋಂದಾಯಿಸಲು ಏ. 10ರವರೆಗೆ ಕಾಲವಕಾಶವಿದ್ದು, ಇದರ ಸದುಪಯೋಗ ಪಡೆಯುವಂತೆ ಮಾಜಿ ಸಂಸದ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಥವಾ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳುವವರು ಫಾರಂ-6ನ್ನು ಭರ್ತಿ ಮಾಡಿ ಆಯಾ ತಹಸೀಲ್ದಾರರಿಗೆ, ನಗರ ಪ್ರದೇಶವಾಗಿದ್ದರೆ ಸಂಬಂಧಿಸಿದ ನಗರ ಸಭಾ ಕಚೇರಿಯಲ್ಲಿ ಭರ್ತಿ ಮಾಡಿದ ಫಾರಂನೊಂದಿಗೆ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಿದ್ದಾರೆ. ಈ ಅರ್ಜಿಗಳು ಆಯಾ ತಾಲೂಕು, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಉಚಿತವಾಗಿ ದೊರೆಯುತ್ತವೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಶಿಬಿರ ಉದ್ಘಾಟನೆ
ಕೊಟ್ಟೂರು: ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಮತ್ತು ಸ್ವಚ್ಛತೆ ಅರಿವು ಮೂಡಿಸುವ ಜೊತೆಗೆ ಸದಾ ಜಾಗೃತಿಯುಂಟು ಮಾಡಲು ಕಾಲೇಜುಗಳ ಎನ್ನೆಸ್ಸೆಸ್ ಘಟಕಗಳು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಜಿಪಂ ಸದಸ್ಯ ಪಿ. ಚನ್ನಬಸವನಗೌಡ ಹೇಳಿದರು. ಸಮೀಪದ ತಿಮ್ಮಲಾಪುರ ಗ್ರಾಮದಲ್ಲಿ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಎನ್ನೆಸ್ಸೆಸ್ ಘಟಕ ಆಯೋಜಿಸಿರುವ ವಾರದ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ನೀತಿಪಾಠ ಹೇಳುವ ಪ್ರತಿಯೊಂದು ಶಿಬಿರಗಳನ್ನು ಗ್ರಾಮಗಳಲ್ಲಿ ಯಶಸ್ವಿಗೊಳಿಸಿ, ಅವುಗಳ ಬೆಂಬಲಕ್ಕೆ ನಿಲ್ಲಬೇಕು ಎಂದರು. ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಚಾನುಕೋಟಿ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಎನ್ಎಸ್ಎಸ್ ಗುರಿ, ಧ್ಯೇಯ, ಉದ್ದೇಶ ಇವುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದರು. ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಪಿ. ಹರೀಶ್ಗೌಡ, ಪ್ರಾಚಾರ್ಯ ಪುರ್ತಿಗೆರೆ, ಕುಸುಮಾ ಸಜ್ಜನ್ ಮತ್ತಿತರರು ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಬಸವರಾಜ್ ಸ್ವಾಗತಿಸಿದರು. ವಾಮದೇವ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

