ಸ್ಥಳೀಯರಿಗೆ ಕೆಜೆಪಿ ಟಿಕೆಟ್: ಗುಡೇಕೋಟಿ
ಹೂವಿನಹಡಗಲಿ: ಹೂವಿನಹಡಗಲಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೊರಗಿನಿಂದ ಸಾಕಷ್ಟು ವಲಸಿಗ ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದಾರೆ. ಆದರೆ ಇಲ್ಲಿನ ಕಾರ್ಯಕರ್ತರ ಅಭಿಪ್ರಾಯದಂತೆ ಸ್ಥಳೀಯರಿಗೆ ಕೆಜೆಪಿ ಟಿಕೆಟ್ ನೀಡುತ್ತೇವೆ ಎಂದು ಕೆಜೆಪಿ ಪಶ್ಚಿಮ ತಾಲೂಕು ಜಿಲ್ಲಾಧ್ಯಕ್ಷ ನಾಗರಾಜ ಗುಡೇಕೋಟಿ ಹೇಳಿದ್ದಾರೆ.
ತಾಲೂಕು ಕೆಜೆಪಿ ಅಧ್ಯಕ್ಷ ಸೊಪ್ಪಿನ ವೀರಣ್ಣ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಕಾಂಕ್ಷಿಗಳ ಅರ್ಜಿಗಳನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಲಾಗಿದೆ. ಎಲ್. ಕೃಷ್ಣನಾಯ್ಕ, ಹರೀಶ, ರಾಮಾಂಜನಿ, ತಿರುಮಲೇಶ ಅರ್ಜಿ ಸಲ್ಲಿಸಿದ್ದಾರೆ. ಈ ಕ್ಷೇತ್ರದ ಜಾತಿವಾರು ಮತಗಳ ಆಧಾರದ ಮೇಲೆ ಪಕ್ಷ ಟಿಕೆಟ್ ನೀಡುವ ಕುರಿತು ಚಿಂತನೆ ನಡೆದಿದೆ ಏ. 9ರೊಳಗೆ 2ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು.
ಕಾಂಗ್ರೆಸ್ ಪಕ್ಷದ ಕೆಲವು ಸ್ಥಳೀಯರು ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ತಮ್ಮೊಂದಿಗೆ ಚರ್ಚಿಸಿದ್ದಾರೆ. ಅವರು ಅರ್ಜಿ ಸಲ್ಲಿಸಿದರೆ ಪಡೆಯುತ್ತೇವೆ. ಪಕ್ಷಕ್ಕೆ ಬರುವವರನ್ನು ಸ್ವಾಗತಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ, ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಪಕ್ಷ ಸಂಘಟನೆ ಮಾಡುವ ಉದ್ದೇಶ ಹೊಂದಿರುವವರಿಗೆ ಕೆಜೆಪಿ ಟಿಕೆಟ್ ಲಭ್ಯ. ಇದರಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದರು.
ಈಗಾಗಲೇ ತಾಲೂಕು ಮಟ್ಟದ ಕೆಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು. ಕೆಂಚಪ್ಪ, ವಿಶ್ವನಾಥ ರೆಡ್ಡಿ, ವಿನಯಕುಮಾರ, ಕರಿಬಸವನಗೌಡ, ಕಿನ್ನೂರೇಶ್ವರ, ವಾಮದೇವ, ಚಂದ್ರಪ್ಪ, ಸೊಪ್ಪಿನ ವೀರಣ್ಣ, ವೀರನಗೌಡ, ಅರುಣಾ ಮಧುನಾಯ್ಕ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

