ಬಳ್ಳಾರಿ

ಕಾರ್ಪ್ ಬ್ಯಾಂಕ್ 108ನೇ ಶಾಖೆ ಉದ್ಘಾಟನೆ

Published On :

ಬಳ್ಳಾರಿ:  ತಾಲೂಕಿನ ಕುಡತಿನಿ ಗ್ರಾಮದಲ್ಲಿ ಕಾರ್ಪೋರೇಷನ್ ಬ್ಯಾಂಕಿನ 108ನೇ ಶಾಖೆಯನ್ನು ಗ್ರಾಪಂ ಅಧ್ಯಕ್ಷ ವೈ. ಹುಲುಗಪ್ಪ ಉದ್ಘಾಟಿಸಿದರು. ಇದರಂಗವಾಗಿ ವೈದ್ಯಕೀಯ ಉಚಿತ ತಪಾಸಣೆ ಶಿಬಿರ ಮತ್ತು ಕುಡತಿನಿಯ ಮದರ್ ಥೆರೆಸಾ ಹಿರಿಯ ಪ್ರಾಥಮಿಕ ಶಾಲೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ, ಸಿಹಿ ವಿತರಿಸಲಾಯಿತು. ಶಾಖಾ ವ್ಯವಸ್ಥಾಪಕ ಕೆ.ಟಿ. ಮಾನೆ ಸ್ವಾಗತಿಸಿದರು. ಸಿ. ಗೀತಾ ವಂದಿಸಿದರು.

ಬೈಕ್,ಗೆ ಲಾರಿ ಡಿಕ್ಕಿ: ಇಬ್ಬರ ಸಾವು
ಬಳ್ಳಾರಿ:
ಬೈಕ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟು ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಮೋಕ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂದವಾಳ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು ಆಂಧ್ರಪ್ರದೇಶದ ಆಲೂರು ಗ್ರಾಮದ ವಿಜಯಕುಮಾರ (23) ಮತ್ತು ಶಾಮ್,ಸನ್ (22) ಎಂದು ಗುರುತಿಸಲಾಗಿದೆ. ಈ ಇಬ್ಬರು ಬಳ್ಳಾರಿಯಿಂದ ಆಂಧ್ರದ ಕಡೆಗೆ ಬೈಕ್,ನಲ್ಲಿ ಹೊರಟಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದರೆ, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ಎರ್ರಿಸ್ವಾಮಿ ಎಂಬುವವನನ್ನು ಬಂಧಿಸಲಾಗಿದೆ.

ಲಾರಿ ಡಿಕ್ಕಿ: ಬಾಲಕ ಸಾವು
ಸಂಡೂರು:
ಪಾದಚಾರಿ ಬಾಲಕನೋರ್ವ ರಸ್ತೆ ದಾಟುವಾಗ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ಜಯಸಿಂಗಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಬಾಲಕನನ್ನು ಗ್ರಾಮದ ಕಿರಣ ವೆಂಕಟೇಶ (9) ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿದೆ. ಗಾಯಗೊಂಡ ಬಾಲಕನನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಾಲಕ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಿಂದ ಕೆರಳಿದ ಗ್ರಾಮಸ್ಥರು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಆತನನ್ನು ಥಳಿಸಿದ್ದಾರೆ.  ಹಲ್ಲೆಗೊಳಗಾದ ಚಾಲಕನನ್ನು ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.