ಬಳ್ಳಾರಿ

ಹೂವಿನಹಡಗಲಿ: ಕೆಜೆಪಿಗೆ ಬಂಡಾಯದ ಬಿಸಿ

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಮಾ. 31
ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಅಧಿಕೃತ ಅಭ್ಯರ್ಥಿಯಾಗಿ ಮಧು ನಾಯ್ಕ ಅವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದೆ. ಕೆಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಎಂಜಿನಿಯರ್ ರಾಮಾಂಜಿನಿ ಹಗರನೂರು ಹೇಳಿದ್ದಾರೆ.
ಪಟ್ಟಣದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಜೆಪಿ ಆರಂಭವಾದಾಗಿನಿಂದ ಈ ವರೆಗೂ ಕ್ಷೇತ್ರದಲ್ಲಿ ಪಕ್ಷ ಸಂಘಟಿಸುತ್ತಿದ್ದೇನೆ. ಹೀಗಾಗಿ ತಮಗೆ ಟಿಕೆಟ್ ನೀಡಬಹುದು ಎಂಬ ಆಶಾಭಾವನೆ ಇತ್ತು. ಆದರೆ ಕೆಜೆಪಿ ಕೋರ್ ಕಮಿಟಿ ಕೊನೆ ಗಳಿಗೆಯಲ್ಲಿ ಕೈ ಕೊಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದಿನಿಂದಲೂ ಬಿ.ಎಸ್. ಯಡಿಯೂರಪ್ಪ, ಇತರ ನಾಯಕರ ಜತೆಗೆ ತಾವು ನಿರಂತರ ಸಂಪರ್ಕ ಇಟ್ಟುಕೊಂಡಿದ್ದು, 3 ತಿಂಗಳಿನಿಂದ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡುತ್ತಿದ್ದೇನೆ. ಈಗ ತಮ್ಮ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಚರ್ಚಿಸಿ, ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದರು. ನಿಮಗೆ ಟಿಕೆಟ್ ನೀಡುತ್ತೇವೆ. ನಾಮಪತ್ರ ಸಲ್ಲಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಿ ಎಂದು ಕೆಜೆಪಿ ಕೋರ್ ಕಮಿಟಿ ಸದಸ್ಯರು ಹೇಳಿ ಮೋಸ ಮಾಡಿದ್ದಾರೆ. ತಮಗೆ ಟಿಕೆಟ್ ತಪ್ಪಲು ಸಿ.ಎಂ. ಉದಾಸಿ ಕಾರಣ ಎಂದು ದೂರಿದ ರಾಮಾಂಜಿನಿ, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ನೀಲನಗೌಡ, ವೆಂಕಟೇಶ, ಭೋಜರಾಜ, ಪ್ರಶಾಂತ, ಶ್ರೀನಿವಾಸ, ಸುರೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.