ಬಳ್ಳಾರಿ

ಕಾಂಗ್ರೆಸ್ ಅಭ್ಯರ್ಥಿ ಪರ ಸುನೀಲ್ ಶೆಟ್ಟಿ, ಮಹಿಮಾ ಚೌಧರಿ ಪ್ರಚಾರ

Published On :

ಹೊಸಪೇಟೆ: ಹೊಸಪೇಟೆ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಪರ ಗುರುವಾರ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ, ಮಹಿಮಾ ಚೌಧರಿ, ಅಫ್ತಾಬ್ ಖಾನ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯ. ವಹಾಬ್ ಅವರ ಕುಟುಂಬದ ಜತೆಗೆ ಒಳ್ಳೆಯ ಬಾಂಧವ್ಯ ಹೊಂದಿದ್ದು ಸ್ನೇಹ ಮತ್ತು ವಿಶ್ವಾಸಕ್ಕೆ ಬೆಲೆ ಕೊಟ್ಟು ಅವರ ಪರ ಪ್ರಚಾರ ನಡೆಸಲು ಬಂದಿದ್ದೇನೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದೆ. ರಾಜ್ಯದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದರು.
ಯುವಕರು ರಾಜಕೀಯಕ್ಕೆ ಬರಲಿ: ಬಾಲಿವುಡ್ ನಟಿ ಮಹಿಮಾ ಚೌಧರಿ ಮಾತನಾಡಿ, ಯುವಜನರನ್ನು ಈ ಹಿಂದಿನ ಸರ್ಕಾರಗಳು ಕಡೆಗಣಿಸಿವೆ. ಯುವ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯುವಜನರು ಜಾಗೃತರಾಗಿ ಹಕ್ಕಿಗಾಗಿ ಹೋರಾಟ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಮತದಾನದಲ್ಲಿ ತಪ್ಪದೇ ಭಾಗವಹಿಸುವ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.