ಬಳ್ಳಾರಿ

ಕಾರ್ಮಿಕ ದಿನಾಚರಣೆ

Published On :

ಬಳ್ಳಾರಿ:  ರೈಸ್‌ಮಿಲ್ ಕಾರ್ಮಿಕರ ಸಂಘಟನೆಯ ವತಿಯಿಂದ ನಗರದಲ್ಲಿ ಇತ್ತೀಚೆಗೆ ಕಾರ್ಮಿಕರ ದಿನಾಚರಣೆ ನಡೆಯಿತು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ. ಪೀರ್ ಮೊಹಮ್ಮದ್,  ಭಾರತ ಕಮ್ಯುನಿಸ್ಟ್ ಪಕ್ಷದ ನಗರ ಘಟಕದ ಕಾರ್ಯದರ್ಶಿ ಶೇಖರ್‌ಬಾಬು, ರೈಸಮಿಲ್ ಕಾರ್ಮಿಕರ ಸಂಘಟನೆ ಖಜಾಂಚಿ ರಾಮಾಂಜಿನಿ, ಸಂಘದ ಮುಖಂಡ ಚಂದ್ರಪ್ಪ ಇದ್ದರು.
9ರಂದು ನೇತ್ರ ತಪಾಸಣೆ
ಬಳ್ಳಾರಿ: ರಾಷ್ಟ್ರೀಯ ಬಸವದಳ ಟ್ರಸ್ಟ್ ಜಿಲ್ಲಾ ಘಟಕವು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಮೇ 9ರಂದು ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ತಾಲೂಕಿನ ಕಪ್ಪಗಲ್ಲು ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದೆ. ವಿಶ್ವಗುರು ಬಸವಣ್ಣನವರ 880ನೇ ಜಯಂತಿ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದು, ನೇತ್ರ ತಜ್ಞರಾದ ಡಾ.ಟಿ. ನಾಗರಾಜ ಮತ್ತು ಡಾ.ಎನ್ ವಿಜಯ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮಲ್ಲಿಕಾರ್ಜುನ ಗೌಡ ಮೊ.ಸಂ-9844879522, ಶರಣಬಸವಕೋಟೆ ಮೊ.ಸಂ- 9916768060ಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಟ್ರಸ್ಟ್ ಪ್ರಕಟಣೆ ಮೂಲಕ ಕೋರಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.