ದ್ವಿತೀಯ ಪಿಯು: ಜಿಲ್ಲೆಗೆ 21ನೇ ಸ್ಥಾನ
ಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಈ ಬಾರಿ ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಗೆ 21ನೇ ಸ್ಥಾನ ಲಭಿಸಿದೆ. ಕಳೆದ ವರ್ಷದ ದ್ವಿತೀಯ ಪಿಯು ಫಲಿತಾಂಶಕ್ಕೆ ಹೋಲಿಸಿದರೆ ಬಳ್ಳಾರಿ ಜಿಲ್ಲೆಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಈ ಬಾರಿ 22ನೇ ಸ್ಥಾನದಿಂದ 21ನೇ ಸ್ಥಾನಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 13,200 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಅದರಲ್ಲಿ 8,390 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, ಶೇ. 63.56ರಷ್ಟು ಫಲಿತಾಂಶ ಪಡೆದಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಯು. ರಾಮಮೂರ್ತಿ ತಿಳಿಸಿದ್ದಾರೆ.
ನಗರ ಭಾಗದಲ್ಲಿ 10,866 ವಿದ್ಯಾರ್ಥಿಗಳು (ಫ್ರೆಷರ್ಸ್) ಪರೀಕ್ಷೆಗೆ ಹಾಜಾರಾಗಿದ್ದು, ಅದರಲ್ಲಿ 7,063 ವಿದ್ಯಾರ್ಥಿಗಳು (ಶೇ. 65) ಉತ್ತಿರ್ಣರಾಗಿದ್ದಾರೆ. ಹಾಗೆಯೇ ಗ್ರಾಮೀಣ ಭಾಗದಲ್ಲಿ (ಫ್ರೆಷರ್ಸ್) 2,334 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅದರಲ್ಲಿ 1,327 (ಶೇ. 56.86) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 5,216 ವಿದ್ಯಾರ್ಥಿಗಳಲ್ಲಿ 2,869 (ಶೇ. 55) ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 3,298 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅದರಲ್ಲಿ 2,229 (ಶೇ. 67.59) ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಆದರೆ ಈ ಎರಡು ವಿಭಾಗಗಳಿಗೆ ಹೋಲಿಸಿದರೆ, ವಿಜ್ಞಾನ ವಿಭಾಗದಲ್ಲಿ 4,686 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅದರಲ್ಲಿ 3,292 (ಶೇ. 70.25ರಷ್ಟು) ವಿದ್ಯಾರ್ಥಿಗಳು ಉತ್ತಿರ್ಣರಾಗುವ ಮೂಲಕ ಈ ಬಾರಿ ವಿಜ್ಞಾನ ವಿಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಉತ್ತಿರ್ಣರಾಗಿರುವುದು ವಿಶೇಷ.
ನಗರದ ವೀವಿ ಸಂಘದ ಇಂಡಿಪೆಂಡೆಟ್ ಪಿಯು ಕಾಲೇಜಿನ ವಿದ್ಯಾರ್ಥಿ ಜೆ. ವಿಶಾಲ್ (ವಿಜ್ಞಾನದಲ್ಲಿ) 600 ಅಂಕಗಳಿಗೆ 591 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

