ಬಿಸಿಎಂ ಹಾಸ್ಟೆಲ್ಗೆ ಅರ್ಜಿ ಆಹ್ವಾನ
ಬಳ್ಳಾರಿ: ಬಳ್ಳಾರಿ ತಾಲೂಕಿನ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ, ಕುರುಗೋಡು, ಶಿಡಿಗಿನಮೊಳ, ರೂಪನಗುಡಿ, ಜಾನೆಕುಂಟೆ, ಮೋಕಾದ ಸರ್ಕಾರಿ ಬಿಸಿಎಂ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಳ್ಳಾರಿಯ ಪಾರ್ವತಿನಗರ ಹಾಗೂ ಕುಡಿತಿನಿಯ ಸರ್ಕಾರಿ ಬಿಸಿಎಂ ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಬಳ್ಳಾರಿ ನಗರದ ಸರ್ಕಾರಿ ಬಿಸಿಎಂ ಮೆಟ್ರಿಕ್ಪೂರ್ವ ಅಲ್ಪಸಂಖ್ಯಾತರ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಬೆಣಕಲ್ಲು ಗ್ರಾಮದ ಆಶ್ರಮ ಶಾಲೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಿಂದುಳಿದ ವರ್ಗಗಳ ಪ್ರವರ್ಗ 2ಎ, ಬಿಎ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರು. 15 ಸಾವಿರ ಹಾಗೂ ಪ್ರವರ್ಗ- 1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುಂಪಿಗೆ ಸೇರಿದ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರು. 50,920 ಒಳಗಿರಬೇಕು. ಆಯ್ಕೆಯಾದವರಿಗೆ ಉಚಿತ ಊಟ, ವಸತಿ, ಪಠ್ಯ ಮತ್ತಿತರ ಸೌಲಭ್ಯ ಒದಗಿಸಲಾಗುವುದು. ಆಶ್ರಮ ಶಾಲೆಯಲ್ಲಿ 1ರಿಂದ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಸರ್ಕಾರದ ಅಂಗೀಕೃತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಶೈಕ್ಷಣಿಕ ಸಂಸ್ಥೆಯಿಂದ 5 ಕಿ.ಮೀ ದೂರದಲ್ಲಿ ವಾಸಿಸುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 11ರೊಳಗಾಗಿ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ, ತಾಪಂ ಆವರಣ, ಕೋಟೆ, ಬಳ್ಳಾರಿ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ, ತಾಪಂ ಆವರಣ, ಬಳ್ಳಾರಿ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

