ಬಳ್ಳಾರಿ

ಕಂಪ್ಲಿ: ಕಾಂಗ್ರೆಸ್ ಸೋಲಿಗೆ ಅಭ್ಯರ್ಥಿಯೇ ಕಾರಣ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 10
ಕಂಪ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಅಭ್ಯರ್ಥಿ ಗುಜ್ಜಲ ನಾಗರಾಜ್ ವರ್ತನೆ, ನಿರ್ಲಕ್ಷ್ಯಗಳೇ ಕಾರಣ. ಗುಜ್ಜಲ್ ನಾಗರಾಜ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡುವುದಾಗಿ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಜ್ಜಲ ಗಾದಿಲಿಂಗಪ್ಪ ಮತ್ತು ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರಾವ್ ಖಂಡಿಸಿದ್ದಾರೆ.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಚುನಾವಣೆಯಲ್ಲಿ ತಮ್ಮ ಪರವಾಗಿ ಪಕ್ಷದ ಮುಖಂಡರು ಪ್ರಚಾರ ನಡೆಸಿಲ್ಲ, ಬೆಂಬಲ ಸೂಚಿಸಿಲ್ಲ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುಜ್ಜಲ ನಾಗರಾಜ್ ಮಾಡಿರುವ ಆರೋಪವನ್ನು ನಿರಾಕರಿಸಿದರು. ಕಂಪ್ಲಿ, ಕುರುಗೋಡು, ಕೋಳೂರು ಮುಂತಾದ ಭಾಗಗಳಲ್ಲಿ ನಾವೆಲ್ಲ ಸೇರಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇವೆ, ಶ್ರಮಿಸಿದ್ದೇವೆ. ಅವರ ಆರೋಪ ಸತ್ಯಕ್ಕೆ ದೂರ ಎಂದರು.
ಅಭ್ಯರ್ಥಿಯಾಗಿ ಗುಜ್ಜಲ ನಾಗರಾಜ್ ನಾಮಪತ್ರ ಸಲ್ಲಿಸುವಾಗಲೂ ಪಕ್ಷದ ಮುಖಂಡರನ್ನು ಆಹ್ವಾನಿಸಿಲ್ಲ. ಕರವೇ ಕಾರ್ಯಕರ್ತರು, ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರಾಗಿ ನಾವೇ ಅವರ ಪರವಾಗಿ ಪ್ರಚಾರ ಮಾಡಿದ್ದೇವೆ. ಅವರು ನಮ್ಮನ್ನು ಎಂದೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ದೂರಿದರು.
ಸ್ಥಳೀಯ ಸಂಸ್ಥೆ ಚುನಾವಣೆ ಅಥವಾ ಪಕ್ಷ ಸಂಘಟನೆ ವಿಚಾರದಲ್ಲಿ ಗುಜ್ಜಲ ನಾಗರಾಜ್ ಕೆಲಸ ಮಾಡಿಲ್ಲ. ಅವರಿಗೆ ಪಕ್ಷದ ಟಿಕೆಟ್ ನೀಡಬಾರದು ಎಂದು ಮುಖಂಡರಿಗೆ ಮನವಿ ಮಾಡಿದ್ದೆವು. ಆದರೂ ಅವರ ಪರ ಪ್ರಚಾರ ಮಾಡಿದ್ದೇವೆ. ಅವರೇ ತಮ್ಮ ಪರಿಚಿತರಿಗೆ ಸುರೇಶ್‌ಬಾಬು ಪರವಾಗಿ ಕೆಲಸ ಮಾಡಿ ಎಂದು ಹೇಳಿದ್ದಾಗಿ ತಿಳಿದುಬಂದಿದೆ ಎಂದು ತಿಳಿಸಿದರು.
ರವೀಂದ್ರ ರಘು, ಉಸ್ಮಾನ್, ಬಿ.ಎಲ್. ಬಾಬು, ಬಿ. ನಾಗರಾಜ್, ಡಿಸಿಸಿ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.