ವಸತಿ ನಿಲಯ ಪ್ರವೇಶಕ್ಕೆ ಆಹ್ವಾನ
ಬಳ್ಳಾರಿ: ಬಳ್ಳಾರಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ಪೂರ್ವ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ, ಎಮ್ಮಿಗನೂರು, ಕುಡಿತಿನಿ, ಮೋಕಾ, ಕುರುಗೋಡು ಹಾಗೂ ಚೆಳ್ಳಗುರ್ಕಿಯ ಮೆಟ್ರಿಕ್ಪೂರ್ವ ಬಾಲಕರ ನಿಲಯ ಪ್ರವೇಶಕ್ಕಾಗಿ 9ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಬಳ್ಳಾರಿ ಹಾಗೂ ಕುಡಿತಿನಿಯಲ್ಲಿರುವ ಮೆಟ್ರಿಕ್ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 9ರಿಂದ 10ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಜೂ. 7ರೊಳಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಬಳ್ಳಾರಿ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಪಠ್ಯಪುಸ್ತಕ, ಸ್ಟೇಷನರಿ, ಸಮವಸ್ತ್ರ, ಹಾಸಿಗೆ, ಹೊದಿಕೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹುಲಿಗೆಮ್ಮ ದೇವಿ ಜಾತ್ರೆ: ಪೂರ್ವಭಾವಿ ಸಭೆ
ಕೊಪ್ಪಳ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಮೇ 26ರಿಂದ ಜೂ. 4ರ ವರೆಗೆ ಜರುಗಲಿದೆ. ಜಾತ್ರೆಯ ಸಿದ್ಧತೆಗಳ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆ ಮೇ 15ರಂದು ಸಂಜೆ 5ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಲಿದೆ. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಿದ್ದರಾಮಯ್ಯ ಸಿಎಂ: ವಿಜಯೋತ್ಸವ
ಯಲಬುರ್ಗಾ: ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಶುಕ್ರವಾರ ಕಾಂಗ್ರೆಸ್ನ ಸ್ಥಳೀಯ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ, ಕನಕದಾಸ ವೃತ್ತ, ಕನ್ನಡ ಕ್ರಿಯಾ ಸಮಿತಿ ವೃತ್ತದ ಬಳಿ ಪಟಾಕಿಗಳನ್ನು ಸಿಡಿಸಿ, ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ 'ಕನ್ನಡಪ್ರಭ'ದೊಂದಿಗೆ ಕೆಪಿಸಿಸಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಜನತೆ ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದು ಸಂತಸ ತಂದಿದೆ ಎಂದರು. ವಿಜಯೋತ್ಸವದಲ್ಲಿ ಶಿವಬಸಪ್ಪ ಗಡಾದ, ಅಯ್ಯನಗೌಡ ಶೀಲವಂತರ, ಶರಣಪ್ಪ ಅರಕೇರಿ, ರೇವಣೆಪ್ಪ ಹಿರೇಕುರಬರ, ಅಂದಾನಗೌಡ ಪೊಲೀಸ್ಪಾಟೀಲ್, ಆನಂದ ಉಳ್ಳಾಗಡ್ಡಿ, ಬಸವರಾಜ ಗಡಾದ, ಮೌಲಾಹುಸೇನ ಬುಲ್ಡಿಯಾರ್, ಸಂಗಣ್ಣ ಟೆಂಗಿನಕಾಯಿ, ಬಾಲಚಂದ್ರ ಸಾಲಬಾವಿ,ಬಸವರಾಜ ಕುಡಗುಂಟಿ, ಮಲ್ಲಪ್ಪ ಜೋಗಿನ್, ಬಸವರಾಜ ಒಂಟೇಲಿ ಇದ್ದರು.
ಮೊರಾರ್ಜಿ ಕಾಲೇಜುಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ: ಬಳ್ಳಾರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪೋಲಯ್ಯ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈ ಹಿಂದೆ ಪಾಸು ಮಾಡಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ತರಗತಿ ದಾಖಲಾತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪಿಸಿಎಂಬಿ, ಪಿಸಿಎಂಸಿ ಸೇರುವವರಿಗೆ ಮಾತ್ರ ಪ್ರವೇಶಾವಕಾಶವಿದೆ. ಕಾಲೇಜಿನಲ್ಲಿ ಒಟ್ಟು 80 ಸ್ಥಾನಗಳು ಖಾಲಿಯಿದ್ದು, ಶೇ. 75ರಷ್ಟು ಸ್ಥಾನಗಳನ್ನು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಉಳಿದ ಶೇ. 25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಒಟ್ಟು ಸ್ಥಾನಗಳಲ್ಲಿ ಶೇ. 50ರಷ್ಟು ಬಾಲಕಿಯರಿಗೆ ಮೀಸಲಿರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಾರ್ಷಿಕ ಆದಾಯ ರು. 2 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಆಯ್ಕೆಯಾದವರಿಗೆ ಉಚಿತ ವಿದ್ಯಾರ್ಥಿ ನಿಲಯದ ವ್ಯವಸ್ಥೆಯಿದೆ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಆದ್ಯತೆ ಇದೆ. ಅರ್ಜಿಯನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯರಿಂದ ಪಡೆಯಬಹುದು. ಆಸಕ್ತ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜಿನ ಪ್ರಾಚಾರ್ಯರಿಗೆ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ತಮ್ಮ ಅರ್ಜಿಗಳನ್ನು ಮೇ 20ರೊಳಗಾಗಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಬಳ್ಳಾರಿ: ಬಿಸಿಎಂ ಇಲಾಖೆ ವತಿಯಿಂದ ಬಳ್ಳಾರಿ ತಾಲೂಕಿನ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ನೀಡಲು ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ವಾರ್ಷಿಕ ವರಮಾನ, ಜಾತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳ ದೃಢಿಕರಿಸಿದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಮೇ 29ರೊಳಗಾಗಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರ, 2ನೇ ಕ್ರಾಸ್, ದೇವಿನಗರ, ಬಳ್ಳಾರಿ ಇವರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ, ತಾಪಂ ಆವರಣ, ಕೋಟೆ ಬಳ್ಳಾರಿ ಇಲ್ಲಿಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

