ಬಸವ ಜಯಂತಿ: ಸಾಮೂಹಿಕ ವಿವಾಹ
ಹೂವಿನಹಡಗಲಿ: ತಾಲೂಕಿನ ಮಾಗಳ ಗ್ರಾಮದಲ್ಲಿ ಬಸವ ಜಯಂತಿ ಹಾಗೂ ಶ್ರೀಗೋಣಿ ಬಸವೇಶ್ವರ ಜಾತ್ರೆಯು ಮೇ 12ರಿಂದ ಆರಂಭವಾಗಿದ್ದು, ಬಸವ ಜಯಂತಿ ಪ್ರಯುಕ್ತ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿವೆ. 32ನೇ ವರ್ಷದ ಜಾತ್ರಾ ಮಹೋತ್ಸವವು ನಿರಂತರವಾಗಿ ನಡೆದು ಬಂದಿದ್ದು, ಮುಂಡರಗಿ ಸಂಸ್ಥಾನಮಠದ ನಾಡೋಜ ಡಾ. ಅನ್ನದಾನೇಶ್ವರ ಸ್ವಾಮೀಜಿ, ರಂಗಾಪುರ-ಮಾಚಕನೂರು ಸದ್ಗುರು ಸಮರ್ಥ ಶ್ರೀ ಮಲ್ಲದಾಸ ಮಹಾರಾಜರ ಸಾನ್ನಿಧ್ಯದಲ್ಲಿ ಮಾನಿಹಳ್ಳಿ ಪುರವರ್ಗದ ಮಠದ ಮಳಿಯೋಗೀಶ್ವರ ಸ್ವಾಮೀಜಿ ಹಾಗೂ ಅಂಗೂರು ಹಿರೇಮಠದ ಶಿವಯೋಗಿಶ್ವರ ಸ್ವಾಮೀಜಿ ಸಮ್ಮುಖದಲ್ಲಿ 30 ಜೊತೆ ನವ ವಧು-ವರರು ಹೊಸ ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ಮೇ 12ರಿಂದ 14ವರೆಗೂ ಜಾತ್ರೆ ನಡೆಯಲಿದ್ದು, ಮೇ 12ರಂದು ನಾಂದಿ ಸಮಾರಾಧನೆ, ಧ್ವಜಾರೋಹಣ ಮತ್ತು ಧರ್ಮ ಸಭೆ, ಮೇ 13ರಂದು ಶ್ರೀ ಗೋಣಿ ಬಸವೇಶ್ವರ ಸ್ವಾಮಿಗೆ ತುಂಗಭದ್ರಾ ನದಿಯಿಂದ 101 ಕುಂಭಾಭಿಷೇಕ ನಂತರ ಶ್ರೀಗಳ ಸಮ್ಮುಖದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸಂಜೆ 4ಕ್ಕೆ 101 ಜೋಡಿ ಎತ್ತಿನ ಮೆರವಣಿಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಸವ ಜಯಂತಿ: ಪೂರ್ವಭಾವಿ ಸಿದ್ಧತೆ
ಹೊಸಪೇಟೆ: ಬಸವ ಜಯಂತಿ ಸಮಾರಂಭವನ್ನು ಅದ್ದೂರಿಯಾಗಿ ಆಚರಿಸಲು ತಾಲೂಕು ಆಡಳಿತ ತೀರ್ಮಾನಿಸಿದ್ದು, ಬಸವ ಜಯಂತಿಯ ಕಾರ್ಯಕ್ರಮವನ್ನು ಎಲ್ಲಾ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು ಎಂದು ಸಹಾಯಕ ಆಯುಕ್ತ ಡಾ. ಡಿ.ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ತೀರ್ಮಾನಿಸಿದೆ. ಮೇ 13ರಂದು ಬೆಳಗ್ಗೆ 7.30ಕ್ಕೆ ಬಸವೇಶ್ವರ ಬಡಾವಣೆಯಲ್ಲಿರುವ ಬಸವ ಪುತ್ಥಳಿಗೆ ಶಾಸಕ ಆನಂದ್ಸಿಂಗ್ ಮಾಲಾರ್ಪಣೆ ನೇರವೇರಿಸಲಿದ್ದಾರೆ. ಪ್ರೊ.ಶಿವಾನಂದ ಉಪನ್ಯಾಸ ನೀಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಕೊಟ್ಟೂರುಸ್ವಾಮಿ ಮಠದವರೆಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಕೊಟ್ಟೂರುಸ್ವಾಮಿ ಮಠದ ಆವರಣದಲ್ಲಿ ಸಮಾರಂಭ ನಡೆಯಲಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ರಮೇಶ್ ಕೋನರೆಡ್ಡಿ ತಿಳಿಸಿದ್ದಾರೆ.
ಇಂದು ವಿವಾಹ
ಬಳ್ಳಾರಿ: ಬಸವ ಜಯಂತಿ ಅಂಗವಾಗಿ ನಗರದ ಶರಣ ಸಕ್ಕರಿ ಕರಡೆಪ್ಪನವರ ಪ್ರಸಾದ ನಿಲಯದಲ್ಲಿ ಮೇ 13ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಲಿದೆ. ಮೇ 13ರಂದು ಬೆಳಗ್ಗೆ 10.30ರಿಂದ 11.30 ರವರೆಗೆ ಮಾಂಗಲ್ಯ ಧಾರಣೆ ನಡೆಯಲಿದ್ದು, ವೀವಿ ಸಂಘದ ಕಾರ್ಯದರ್ಶಿ ಗುರುಸಿದ್ದಸ್ವಾಮಿ ದಂಪತಿಗಳು ಮಾಂಗಲ್ಯ ವಿತರಣೆ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

