ನಾನೇ ಗೆದ್ದಷ್ಟು ಸಂತಸ: ಬೊಮ್ಮಣ್ಣ
ಕೂಡ್ಲಿಗಿ: ಪಕ್ಷೇತರ ಅಭ್ಯರ್ಥಿ ಬಿ. ನಾಗೇಂದ್ರ ಗೆಲವು ನಾನೇ ಗೆದ್ದಷ್ಟು ಸಂತಸ ತಂದಿದೆ ಎಂದು ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸೋಲಿಸಬೇಕೆಂಬ ಬಯಕೆಯಿಂದ ಪಕ್ಷೇತರ ಅಭ್ಯರ್ಥಿ ಪರವಾಗಿದ್ದೆವು. ಕಾಂಗ್ರೆಸ್ನಿಂದ ಎರಡು ಬಾರಿ ಟಿಕೆಟ್ ತಪ್ಪಿಸಲು ನಮ್ಮ ಸಂಬಂಧಿ ಆದ ವೆಂಕಟೇಶ್ನನ್ನು ಮುಂದಿಟ್ಟುಕೊಂಡು ಕೂಡ್ಲಿಗಿ ತಾಲೂಕು ಹಾಗೂ ಬಳ್ಳಾರಿ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಪಿತೂರಿ ನಡೆಸಿದ್ದರು. ನನಗೆ ಪರ್ಯಾಯ ನಾಯಕನನ್ನು ಬೆಳೆಸಬೇಕೆಂಬ ಉದ್ದೇಶದಿಂದ ಕೆಲವು ಮುಖಂಡರು ಎರಡು ಬಾರಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿದರು. ಪರ್ಯಾಯ ನಾಯಕತ್ವ ಸೃಷ್ಟಿಸಲು ಹೋಗಿ ಅವರೇ ಮುಖಭಂಗಕ್ಕೊಳಗಾಗಿದ್ದಾರೆಂದು ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಹೇಳಿದರು. ಬಳ್ಳಾರಿ ಜಿಲ್ಲೆಯಲ್ಲಿ ಗಣಿ ಸಂಪತ್ತು ಲೂಟಿಯಾಗುತ್ತಿದೆ ಎಂದು ಬಳ್ಳಾರಿಗೆ ಕಾಲ್ನಡಿಗೆಯಲ್ಲಿ ಬಂದ ನಾಯಕರಾದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿ ಕಳ್ಳರಿಗೆ ಪ್ರತ್ಯೇಕ ಕೋರ್ಟ್ ಸ್ಥಾಪಿಸಿ ವಿಚಾರಣೆಗೆ ಅವಕಾಶ ಕಲ್ಪಿಸುವ ಭರವಸೆ ನೀಡಿದ್ದರು. ಅವರ ಪಕ್ಷದಲ್ಲೇ ಗಣಿ ಕಳ್ಳರು ಗೆದ್ದಿದ್ದಾರೆ. ಅವರನ್ನು ಸಹ ವಿಚಾರಣೆಗೆ ಒಳಪಡಿಸುವರೇ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ವಡ್ಡಿನ ಶಿವಣ್ಣ, ಹೊಸಹಟ್ಟಿ ನರಸಿಂಹರಾಜು, ಕುರಿಹಟ್ಟಿ ಕೋದಂಡರಾಮ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

