ಸಂಕೀರ್ಣ ಪುಸ್ತಕಗಳ ಆಹ್ವಾನ
ಬಳ್ಳಾರಿ: ಡಾ. ಶಾಂತರಸ ಹೆಂಬೇರಾಳು ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ದತ್ತಿ ಪ್ರಶಸ್ತಿ ನೀಡಲು 2011-12ನೇ ಸಾಲಿಗಾಗಿ ಅರ್ಹ ಮಹಿಳಾ ಬರಹಗಾರರಿಂದ ಸಂಕೀರ್ಣ ಪ್ರಕಾರದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ತಿಳಿಸಿದ್ದಾರೆ. ಪ್ರಶಸ್ತಿಯು ರು. 5000 ನಗದನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗಾಗಿ ಕಳುಹಿಸುವ ಸಂಕೀರ್ಣ (ಪ್ರಬಂಧ, ವಿಮರ್ಶೆ, ಸಂಶೋಧನೆಗೆ ಸಂಬಂಧಪಟ್ಟ ಲೇಖನಗಳ ಸಂಗ್ರಹ) ಪ್ರಕಾರದ ಪುಸ್ತಕವು 2007ನೇ ಜನವರಿಯಿಂದ 2012ನೇ ಡಿಸೆಂಬರ್ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರಬೇಕು. ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಒಂದಕ್ಕಿಂತ ಹೆಚ್ಚು ಕೃತಿಗಳು ಅತ್ಯುತ್ತಮವೆಂದು ಪರಿಗಣಿತವಾದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿದೆ. ಆಸಕ್ತ ಮಹಿಳೆಯರು ಜೂ. 30ರೊಳಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇವರಿಗೆ 3 ಪ್ರತಿಗಳನ್ನು ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ-080-26623584ನ್ನು ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

