ನಾಳೆ ನೀಲಕಂಠೇಶ್ವರ ಮೂರ್ತಿ ಪ್ರತಿಷ್ಠಾಪನೆ
ಹಗರಿಬೊಮ್ಮನಹಳ್ಳಿ: ಹಳೇಹಗರಿಬೊಮ್ಮನಹಳ್ಳಿಯಲ್ಲಿ ಕುರುಹಿನ ಶೆಟ್ಟಿ ಸಮಾಜದವರು ನಿರ್ಮಿಸಿರುವ ಶ್ರೀ ನೀಲಕಂಠೇಶ್ವರ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಮೇ 20ರಂದು ಬೆಳಗ್ಗೆ 5.45ಕ್ಕೆ ಜರುಗಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಸೋಡ ನಿಂಬಣ್ಣ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ಮಾತನಾಡಿದ ಅವರು, ಸೋಮವಾರ ಬ್ರಾಹ್ಮಿ ಮುಹೂರ್ತದಲ್ಲಿ ನೀಲಕಂಠೇಶ್ವರ, ಆತ್ಮಲಿಂಗ, ನಂದೀಶ, ಗಣೇಶ ಹಾಗೂ ಷಣ್ಮುಖ ಸೇರಿದಂತೆ ಪಂಚ ಮೂರ್ತಿಗಳನ್ನು ನೂತನ ದೇವಸ್ಥಾನದಲ್ಲಿ ಕುರುಹಿನಶೆಟ್ಟಿ ಸಮಾಜದ ಮೂಲ ಪೀಠಾಧೀಶ ಶ್ರೀ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ ಪ್ರತಿಷ್ಠಾಪನೆ ಮಾಡಲಿದ್ದಾರೆ ಎಂದರು.
ಮೂರ್ತಿ ಪ್ರತಿಷ್ಠಾಪನೆ ನಂತರ ದೇವಸ್ಥಾನದ ಆವರಣದಲ್ಲಿ ಕುರುಹಿನ ಶೆಟ್ಟಿ ಸಮಾಜದ ಪೀಠಾಧೀಶರ ಸಾನ್ನಿಧ್ಯದಲ್ಲಿ ಧರ್ಮಸಭೆ ಜರುಗಲಿದೆ. ತಾಲೂಕಿನ ನಂದಿಪುರದ ಮಹೇಶ್ವರ ಸ್ವಾಮೀಜಿ ಸಭೆಯನ್ನು ಉದ್ಘಾಟಿಸಲಿದ್ದು, ಕೊಟ್ಟೂರಿನ ಚಾನುಕೋಟಿ ಮಠದ ಸಿದ್ಧಲಿಂಗ ಶಿವಚಾರ್ಯರು, ಹಾಲಸ್ವಾಮಿ ಮಠದ ಹಾಲಶಂಕರ ಸ್ವಾಮೀಜಿ, ನವಲಿ ಹಿರೇಮಠದ ಸಿದ್ಧಲಿಂಗಶ್ರೀ, ಶ್ರೀ ಮಹಾದೇವತಾತನವರು, ಗೋರೂರುಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಕುರುಹಿನ ಶೆಟ್ಟಿ ಸಮಾಜದ ರಾಜ್ಯಾಧ್ಯಕ್ಷ ಈಶ್ವರಪ್ಪ, ಚಲನಚಿತ್ರ ನಟ ನೆನಪಿರಲಿ ಪ್ರೇಮ್, ಶಾಸಕ ಎಸ್. ಭೀಮಾನಾಯ್ಕ್, ಮಾಜಿ ಶಾಸಕ ಸಿರಾಜಶೇಕ್, ಕೆ. ನೇಮಿರಾಜ ನಾಯ್ಕ್, ಸ್ವಾತಂತ್ರ್ಯ ಹೋರಾಟಗಾರ ಹಾಲ್ದಾಳ ಕೊಟ್ರಪ್ಪ ಸೇರಿದಂತೆ ಹಲವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದಕ್ಕೂ ಮುನ್ನ ಮೇ 19ರ ಭಾನುವಾರ ಬೆಳಗ್ಗೆ 7.15ಕ್ಕೆ ಪಟ್ಟಣದ ರಾಮನಗರದ ಶ್ರೀ ಈಶ್ವರ ದೇವಸ್ಥಾನದಿಂದ 108 ಕುಂಭಗಳೊಂದಿಗೆ ನೀಲಕಂಠೇಶ್ವರ ಪಟ್ಟಾದಾರ್ಯ ಶ್ರೀಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ನಿಂಬಣ್ಣ ತಿಳಿಸಿದರು.
ಸಮಾಜದ ಅಧ್ಯಕ್ಷ ಜೋಗೂರು ಮಲ್ಲಣ್ಣ, ಹಿರಾಳ ಶರಣಪ್ಪ, ಕುಬೇರಪ್ಪ, ವಕೀಲರಾದ ಜಗದೀಶ, ಭುನೇಶ್ವರಿ ಮಲ್ಲಣ್ಣ, ಬಸಣ್ಣ, ಸೋಡ ನಾಗರಾಜ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

