ಮೆಟ್ರಿಕ್ ಪೂರ್ವ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 19
ಜಿಲ್ಲೆಯ ಸಂಡೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಡೂರು, ತೋರಣಗಲ್ಲು, ಬಂಡ್ರಿ, ಸೋವೇನಹಳ್ಳಿಯ ಸರ್ಕಾರಿ ಪರಿಶಿಷ್ಟ ಜಾತಿ ವಿದ್ಯಾರ್ಥಿ ನಿಲಯ, ಸಂಡೂರು, ಚೋರನೂರು ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯ, ಯಶವಂತನಗರದ ಆಶ್ರಮ ಶಾಲೆ, ಸಂಡೂರಿನ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಜಿ ಸಲ್ಲಿಸಬಹುದು. ಆಶ್ರಮ ಶಾಲೆಯಲ್ಲಿ 1 ರಿಂದ 4ನೇ ತರಗತಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 9ನೇ ತರಗತಿಗಳ ಪ್ರವೇಶ ಪಡೆಯಬಹುದು.
ಆಸಕ್ತರು ತಮ್ಮ ಅರ್ಜಿಯೊಂದಿಗೆ ನಕಲು ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸ್ಟ್ಯಾಂಪ್ ಸೈಜ್ 3 ಭಾವಚಿತ್ರಗಳು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಮತ್ತಿತರ ದಾಖಲೆಗಳನ್ನು ಲಗತ್ತಿಸಿ ಮೇ 31ರೊಳಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಸಂಡೂರು ಅಥವಾ ಆಯಾ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕೆಂದು ಸಂಡೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

