ಗ್ರಾಮೀಣರಲ್ಲಿ ಸ್ವಚ್ಛತೆ ಅರಿವು ಮೂಡಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 20
ವಿದ್ಯಾರ್ಥಿಗಳಿಗೆ ಗ್ರಾಮೀಣ ವಾತಾವರಣದ ಅನುಭವ ಆಗಬೇಕಿದೆ. ಸಮಾಜ ಕಾರ್ಯ ಶಿಬಿರಗಳಂತಹ ಹಲವಾರು ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಗ್ರಾಮಸ್ಥರಲ್ಲಿ ಗ್ರಾಮದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ಶಿಬಿರ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ. ಗೌರಿ ಮಾಣಿಕ್ ಮಾನಸ ಹೇಳಿದರು.
ನಗರದ ಜ್ಞಾನಜ್ಯೋತಿ ಎಂಎಸ್‌ಡಬ್ಲ್ಯು ಕಾಲೇಜು ಮತ್ತು ಹಂದ್ಯಾಳ ಶ್ರೀ ಮಹಾದೇವತಾತ ಕಲಾಸಂಘದ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಜಂಟಿಯಾಗಿ ತಾಲೂಕಿನ ಹಂದ್ಯಾಳ ಗ್ರಾಮದ ಮಹಾದೇವತಾತ ಮಠದಲ್ಲಿ ಏರ್ಪಡಿಸಿದ್ದ 7 ದಿನಗಳ ಸಮಾಜ ಕಾರ್ಯ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದುಂದುವೆಚ್ಚ ಬೇಡ: ಆಡಂಬರದ ಮದುವೆಗಳಿಗೆ ಕಡಿವಾಣ ಹಾಕಿ ಮಹಿಳೆಯರ ಸ್ವಾಭಿಮಾನ ಕಾಪಾಡಲು ಒತ್ತು ಕೊಡಬೇಕು. ಮಹಿಳೆಯರಿಗೆ ಸಮರ್ಪಕ ಮೂಲ ಸೌಕರ್ಯ ಕಲ್ಪಿಸದೆ ಇದ್ದರೂ, ಪ್ರತಿಯೊಬ್ಬರು ತಮ್ಮ ಗೌರವ, ಪ್ರತಿಷ್ಠೆಗೆ ತಕ್ಕಂತೆ ಆಡಂಬರದ ಮದುವೆ, ಇತರೆ ಕಾರ್ಯಕ್ರಮಗಳಿಗೆ ದುಂದುವೆಚ್ಚ ಮಾಡುತ್ತಿದ್ದಾರೆ. ಅದರಲ್ಲಿ ಕೊಂಚ ಖರ್ಚು ಕಡಿಮೆ ಮಾಡಿ, ತಮ್ಮ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಮಾಡಿಕೊಂಡಲ್ಲಿ ಮಹಿಳೆಯರು ಸ್ವಾಭಿಮಾನದಿಂದ ಜೀವಿಸಲು ಸಾಧ್ಯ ಎಂದರು.
ಮಹಾದೇವ ಕಲಾಸಂಘದ ಅಧ್ಯಕ್ಷ ಪುರುಷೋತ್ತಮ ಹಂದ್ಯಾಳ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಕಾಲೇಜು, ವಿವಿಗಳು ಇಂಥ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ಅಧಿಕವಾಗಿ ಹಮ್ಮಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಕುರಿತು ಹಳ್ಳಿಗರಲ್ಲಿ ಅರಿವು ಮೂಡಿಸಬೇಕು. ಶಿಬಿರಾರ್ಥಿಗಳು ಅಲ್ಲಿನ ಕಲೆ, ಸಂಸ್ಕೃತಿಗಳನ್ನು ಸ್ವೀಕರಿಸಿ, ಬೆಳಕಿಗೆ ತರಬೇಕು. ಗ್ರಾಮಗಳಲ್ಲಿ ಇಂದಿಗೂ ಆಚರಣೆಯಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಬೇಕು ಎಂದು ತಿಳಿಸಿದರು.
ಕುಟುಂಬ ನಿಯಂತ್ರಣ ಶಾಖೆ ವ್ಯವಸ್ಥಾಪಕ ನರಸಿಂಹಮೂರ್ತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಜಿಪಂ ಲೆಕ್ಕಾಧಿಕಾರಿ ಡಾ.ವಿ. ಚನ್ನಪ್ಪ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ.ಡಿ. ಗೌಡ, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟರೆಡ್ಡಿ, ಗ್ರಾಮದ ಮುಖಂಡ ಪ್ರಹ್ಲಾದರೆಡ್ಡಿ, ಎಸ್‌ಬಿಐ ಬ್ಯಾಂಕ್‌ನ ದೇವಣ್ಣ, ಶಿಬಿರಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಾಚಾರ್ಯ ಹರೀಶ್ ನಾಯ್ಕ್ ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಸ್ವಾಮಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

