ಶಾಸಕರಿಂದ ಕಾಮಗಾರಿ ವೀಕ್ಷಣೆ
ಬಳ್ಳಾರಿ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಅನಿಲ್ ಲಾಡ್, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರೊಂದಿಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಡಿಎ ಮೈದಾನದಲ್ಲಿ ನಿರ್ಮಿಸುತ್ತಿರುವ ಕ್ರೀಡಾ ಸಮುಚ್ಚಯ, ಕಿವುಡ, ಮೂಕ ವಿದ್ಯಾರ್ಥಿಗಳು, ಅನಾಥರು, ವಿಕಲಚೇತರಿಗಾಗಿ ನಿರ್ಮಿಸುತ್ತಿರುವ ಶಾಂತಿಧಾಮ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಳವಡಿಸಿರುವ ಪ್ಲಾನಿಟೋರಿಯಂ, ಆದಿ ಮಾನವನಿಂದ ಆಧುನಿಕ ಮಾನವರೆಗೆ ಬೆಳೆದು ಬಂದ ಮಾದರಿಗಳು, ಪ್ರಾಣಿಗಳ ಮಾದರಿಗಳು ಹಾಗೂ ಅವುಗಳ ಧ್ವನಿ ಅಳವಡಿಕೆ, ಕ್ರೀಡಾಂಗಣ, ಈಜುಗೊಳ, ವ್ಯಾಯಾಮ ಉಪಕರಣಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಕ್ಕಳಿಗಾಗಿ ರೂಪಿಸಿರುವ ಧ್ವನಿಯೊಂದಿಗೆ ಚಿತ್ರೀಕರಣ ಮಾಡಿದ ಪ್ಲಾನಿಟೋರಿಯಂ ಮಾದರಿಯನ್ನು ಒಂದು ಪ್ರದರ್ಶನ ಅವಧಿಯವರೆಗೆ ವೀಕ್ಷಿಸಿದರು.
ಜಿಲ್ಲಾಧಿಕಾರಿ ಬಿಸ್ವಾಸ್ ಅವರು ಕಾಮಗಾರಿಗಳ ಯೋಜನೆ, ಅನುಷ್ಠಾನ, ಅನುದಾನ, ಉಪಯುಕ್ತತೆ, ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಿ.ಎಲ್. ನಾರಾಯಣ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಹಳ್ಳಿ, ಮುಖಂಡರಾದ ಆಂಜನೇಯಲು, ಹೊನ್ನೂರಪ್ಪ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

