ಬಳ್ಳಾರಿ

ಸಿಇಟಿ ಪ್ರವೇಶ ಪ್ರಕ್ರಿಯೆ ತಡೆಗೆ ಸರ್ಕಾರಕ್ಕೆ ಆಗ್ರಹ

Published On :

ಹೂವಿನಹಡಗಲಿ: ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ 371(ಜೆ) ಸ್ಥಾನಮಾನ ಅನುಷ್ಠಾನ ಆಗುವವರೆಗೂ ಎಂಜಿಯರಿಂಗ್, ಮೆಡಿಕಲ್ ಕೋರ್ಸ್‌ಗಳ ಸಿಇಟಿ ಪ್ರವೇಶ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕೆಂದು ಹೈ-ಕ 371 ಕಲಂ ಹೋರಾಟ ಸಮಿತಿಯ ಸಂಚಾಲಕ ಪ್ರೊ. ಎಸ್.ಎಸ್. ಪಾಟೀಲ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಪ್ರತಿಕಾ ಹೇಳಿಕೆ ನೀಡಿದ ಅವರು, ಈ ಕುರಿತು ಹೈ-ಕ ಪ್ರದೇಶದ 4 ವಿವಿಧ ಸಚಿವರುಗಳಿಗೆ ಮನವಿ ನೀಡಲಾಗಿದೆ. 371ನೇ ಕಲಂಗೆ ಕೇಂದ್ರದ ಯುಪಿಎ ಸರ್ಕಾರ ಈ ಹಿಂದೆಯೇ ಒಪ್ಪಿಗೆ ನೀಡಿದೆ. ಆದರೆ, ಹಿಂದಿನ ರಾಜ್ಯ ಸರ್ಕಾರ ಈ ಸ್ಥಾನಮಾನವನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ಈ  ಭಾಗದ 6 ಜಿಲ್ಲೆಗಳ ಎಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳು ಹೈ-ಕ ಪ್ರದೇಶದ ವಿಶೇಷ ಮೀಸಲಾತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹೈ-ಕ ಪ್ರದೇಶ ವ್ಯಾಪ್ತಿಯಲ್ಲಿನ 6 ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಇದನ್ನೇ ಮಾನದಂಡವನ್ನಾಗಿ ಇಟ್ಟುಕೊಂಡು ಜಯ ಸಾಧಿಸಿದ್ದಾರೆ. ರಾಜ್ಯದಲ್ಲೂ ಆ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು. ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಈ ವಿಶೇಷ ಮೀಸಲಾತಿ ಸೌಲಭ್ಯವನ್ನು ಶೀಘ್ರ ಜಾರಿಗೊಳಿಸಬೇಕು. ಜತೆಗೆ ಈ 371ನೇ ಕಲಂ ಅನುಷ್ಠಾನವಾಗುವವರೆಗೂ ಸಿಇಟಿ ಪ್ರಕ್ರಿಯೆಯನ್ನು ತಡೆ ಹಿಡಿದು, ಈ ಭಾಗದಿಂದ ವಂಚಿತವಾಗುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಇದು ಸಾಧ್ಯವಾಗದಿದ್ದರೆ ಸಿಇಟಿಯ ಮೊದಲೆರಡು ಸುತ್ತುಗಳ ಬಳಿಕ ಉಳಿದ ಎಲ್ಲ ಸೀಟುಗಳನ್ನು ಹೈ-ಕ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ  ಈ ಭಾಗದ ಜನಪ್ರತಿನಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಪಾಟೀಲ ಆಗ್ರಹಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.