ಬಳ್ಳಾರಿ

ಮಾವೋಗಳ ಅಟ್ಟಹಾಸ: ಕೊಂಡಯ್ಯ ಖಂಡನೆ

Published On :

ಬಳ್ಳಾರಿ: ಛತ್ತೀಸ್‌ಗಡ ರಾಜ್ಯದ ಬಸ್ತಾರ್ ಜಿಲ್ಲೆಯಲ್ಲಿ ಮಾವೋವಾದಿಗಳು ನಡೆಸಿದ ದಾಳಿಯನ್ನು ಮಾಜಿ ಸಂಸದ ಕೆ.ಸಿ. ಕೊಂಡಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಛತ್ತೀಸ್‌ಗಡ ರಾಜ್ಯದ ಬಸ್ತಾರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಸಶಸ್ತ್ರ ಮಾವೋವಾದಿಗಳು ಅಮಾನುವೀಯವಾಗಿ ದಾಳಿ ನಡೆಸಿದ್ದಾರೆ.
ಪಕ್ಷದ 21 ಮುಖಂಡರು, ಕಾರ್ಯಕರ್ತರ ಮಾರಣ ಹೋಮ ನಡೆಸಿದ್ದಾರೆ. ಇದು ಕಾಂಗ್ರೆಸ್ ಮೇಲೆ ನಡೆಸಿದ ದಾಳಿಯಲ್ಲ. ಭಾರತದ ಪ್ರಜಾಸತ್ತೆಯ ಮೇಲೆ ಮಾಡಿದ ಹಲ್ಲೆಯಾಗಿದೆ ಎಂದು ಅವರು ತೀವ್ರ ಆತಂಕ ವ್ಯಕ್ತಪಡಿಸಿದರು. ಛತ್ತೀಸಗಡ ಸರ್ಕಾರವೇ ಮಾರಣ ಹೋಮಕ್ಕೆ ಹೊಣೆಯಾಗಿದ್ದು, ಈ ಪರಿವರ್ತನಾ ಯಾತ್ರೆಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡದ್ದರಿಂದ ಈ ಘಟನೆ ಸಂಭವಿಸಿದೆ. ಒಂದೆಡೆ ಆಡಳಿತರೂಢ ಬಿಜೆಪಿ ಸರ್ಕಾರ ಮಾವೋವಾದಿಗಳ ವಿರುದ್ಧ ಯುದ್ಧದ ಹೆಸರಿನಲ್ಲಿ ಅಮಾಯಕ ಆದಿವಾಸಿಗಳನ್ನು ಕಳೆದ ವಾರ ಕೊಲೆಗೈದಿದ್ದರೆ, ಇನ್ನೊಂದೆಡೆ ಸೂಕ್ತ ಭದ್ರತೆ ಒದಗಿಸದೇ ಸಂವಿಧಾನಾತ್ಮಕ ಕಾರ್ಯಚಟುವಟಿಕೆಗಳನ್ನು ಸಂರಕ್ಷಿಸುವಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ.
ಈ ಪ್ರಕರಣದ ಕುರಿತು ಛತ್ತೀಸ್‌ಗಡ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು. ಜತೆಗೆ ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು.
ಛತ್ತೀಸ್‌ಗಡದಲ್ಲಿನ 24 ಮಾವೋವಾದಿ ತರಬೇತಿ ಕೇಂದ್ರಗಳನ್ನು ರಾಜ್ಯ ಸರ್ಕಾರ ಮುಚ್ಚಬೇಕು ಹಾಗೂ ಮಾವೋವಾದಿಗಳ ಅಟ್ಟಹಾಸ ತಡೆಯಲು, ಅವರ ಬಲ ಕುಗ್ಗಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಕೊಂಡಯ್ಯ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.