ಹೊಸಪೇಟೆ: ಡೊನೇಷನ್ ಹಾವಳಿ ತಪ್ಪಿಸಲು ಆಗ್ರಹ
ಹೊಸಪೇಟೆ: ನಗರದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿನ ಡೊನೇಷನ್ ಹಾವಳಿ ತಪ್ಪಿಸಲು ಮತ್ತು ಆರ್ಟಿಇ ಕಾಯ್ದೆಯಡಿ ಪ್ರವೇಶ ದಾಖಲಾತಿ ತನಿಖೆ ಮಾಡುವಂತೆ ಒತ್ತಾಯಿಸಿ ಸ್ಲಂ ಜನಜಾಗೃತಿ ಅಂದೋಲನ ಸಮಿತಿ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿಪತ್ರ ಸಲ್ಲಿಸಿ ಒತ್ತಾಯಿಸಿದರು.
ನಗರದ ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಅಧಿಕವಾಗಿದ್ದು, ಡೊನೇಷನ್ ಹಾವಳಿಯಿಂದ ನಗರದ ಬಡ ಜನರಿಗೆ ದಿಕ್ಕು ತೋಚದಂತಾಗಿದೆ. ಪ್ರತಿವರ್ಷ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಜಾಸ್ತಿಯಾಗಿರುವುದಿಂದ ತಮ್ಮ ಮಕ್ಕಳನ್ನು ಎಲ್ಲಿ ಸೇರಿಸಬೇಕೆಂದು ಪರದಾಡುತ್ತಿದ್ದಾರೆ. ಹಾವಳಿ ನಿಯಂತ್ರಿಸಲು ಸರ್ಕಾರ ಮತ್ತು ಸಂಘಗಳ ನೇತೃತ್ವದಲ್ಲಿ ಕಾವಲು ಸಮಿತಿ ರಚನೆ ಮಾಡಬೇಕು. ಎಲ್ಲ ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ನಡೆಸಬೇಕು. ತಾಲೂಕಿನಲ್ಲಿರುವ ಪರವಾನಗಿ ಪಡೆಯದ ಖಾಸಗಿ ಶಾಲೆಗಳ ವಿರುದ್ಧ ತಕ್ಷಣ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅನೇಕ ಖಾಸಗಿ ಶಾಲೆಗಳು ಕನ್ನಡ ಶಾಲೆಗಳಿಗೆ ಪರವಾನಗಿ ಪಡೆದು ಆಂಗ್ಲ ಮಾಧ್ಯಮಕ್ಕೆ ಪ್ರವೇಶ ತೆಗೆದುಕೊಳ್ಳುತ್ತಿವೆ. ಈ ಶಾಲೆಗಳ ಪರವಾನಗಿ ರದ್ದುಪಡಿಸಬೇಕು. ಆರ್ಟಿಇ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳಲ್ಲಿ ಎಲ್ಲ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಕ್ಕಳಿಗೆ ಶೇ. 25ರಷ್ಟು ಖಾಸಗಿ ಶಾಲೆಗಳಲ್ಲಿ ದಾಖಲಾತಿ ನೀಡಬೇಕು. ಆದರೆ ಖಾಸಗಿ ಶಾಲೆಗಳಲ್ಲಿ ಸೀಟುಗಳ ಹಂಚಿಕೆ ವಿತರಣೆಯಲ್ಲಿ ಎಲ್ಕೆಜಿ ಮತ್ತು 1ನೇ ತರಗತಿ ಮಕ್ಕಳಿಗೆ ನಿಯಮದ ಪ್ರಕಾರ ಆಯ್ಕೆ ಮಾಡದೇ ಕೇವಲ ತಮ್ಮ ಶಾಲೆಯಲ್ಲಿ ಮೊದಲೇ ಓದಿದ ವಿದ್ಯಾರ್ಥಿಗಳನ್ನು ಶಾಲೆ ಪ್ರಾಚಾರ್ಯರು ಆಯ್ಕೆ ಮಾಡಿಕೊಳ್ಳುತ್ತಿರುವುದು ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸ್ಲಂ ಜನಜಾಗೃತಿ ಅಂದೋಲನ ಸಮಿತಿ ಸಂಚಾಲಕಿ ಎನ್. ಹುಲಿಗೆಮ್ಮ, ರಾಜ್ಯ ಸಂಘಟನಾ ಸಂಚಾಲಕ ರಾಮಚಂದ್ರ, ಸುನೀಲ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

