ಬಳ್ಳಾರಿ

ಡೊನೇಶನ್ ಹಾವಳಿ ತಡೆಗೆ ಒತ್ತಾಯ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 29
ನಗರದ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿಯನ್ನು ತಡೆಗಟ್ಟಬೇಕೆಂದು ನವ ಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕವು ಒತ್ತಾಯಿಸಿದೆ.
ಈ ಕುರಿತಂತೆ ನವಕರ್ನಾಟಕ ಯುವಶಕ್ತಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ನಗರದಲ್ಲಿರುವ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಭೆ ನಡೆಸಬೇಕು ಹಾಗೂ ಭಾಷಾ ನೀತಿ ಉಲ್ಲಂಘನೆ ಮಾಡುವ ಶಾಲೆಗಳ ಮಾನ್ಯತೆಯನ್ನು ರದ್ದು ಮಾಡುವುದು ಸೇರಿದಂತೆ ಸರ್ಕಾರದ ನೀತಿ ನಿಯಮಗಳನ್ನು ಉಲ್ಲಂಘಿಸುವ ಖಾಸಗಿ ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಸಹ ಅಂತಹ ಶಾಲೆಗಳ ಮಾನ್ಯತೆಯನ್ನು ನವೀಕರಿಸಿರುವುದು ಖಂಡನೀಯವಾಗಿದೆ. ಇನ್ನೂ ಕೆಲವೊಂದು ಖಾಸಗಿ ಶಾಲೆಗಳು ತಾವು ಯಾವ ಮಾಧ್ಯಮದಲ್ಲಿ ಬೋಧನೆ ಮಾಡುವುದಾಗಿ ಅನುಮತಿ ಪಡೆದಿರುತ್ತಾರೋ ಅಂತಹ ಶಾಲೆಗಳ ಮುಂದೆ ದಪ್ಪ ಅಕ್ಷರಗಳಲ್ಲಿ ನಾಮಫಲಕಗಳನ್ನು ಕಡ್ಡಾಯವಾಗಿ ಬರೆಯಿಸಬೇಕು. ನಗರ ಪ್ರದೇಶವು ಅಲ್ಲದೇ ಗ್ರಾಮಾಂತರ ಪ್ರದೇಶದಲ್ಲಿ ಸಹ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿರುತ್ತದೆ. ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ನವ ಕರ್ನಾಟಕ ಯುವ ಶಕ್ತಿ ಸಂಘಟನೆಯು ಜಿಲ್ಲೆಯಲ್ಲಿ ಆರ್ಟಿಇ ಕಾನೂನನ್ನು ಉಲ್ಲಂಘಿಸುವ ಶಾಲೆಗಳು, ಭಾಷಾ ನೀತಿಯನ್ನು ಉಲ್ಲಂಘನೆ ಮಾಡಿದ ಶಾಲೆಗಳ ಮಾನ್ಯತೆಯನ್ನು ರದ್ದು ಪಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನವಕರ್ನಾಟಕ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಕಪ್ಪಗಲ್ಲು ಬಿ. ಚಂದ್ರಶೇಖರ್ ಆಚಾರ್ ಹಾಗು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿದ ಬಳಿಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಟಿ.ಎ ನಾರಾಯಣಗೌಡ ಅವರು ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪುಸ್ತಕ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.