ಇಂದು ಕಾರ್ಯಕ್ರಮ
ಬಳ್ಳಾರಿ: ತಾಲೂಕಿನ ಕೋಳೂರು ಹೋಬಳಿ ಶ್ರೀಧರಗಡ್ಡೆ ಗ್ರಾಮದಲ್ಲಿ ಜೂ.1ರಂದು ಜನಸ್ಪಂದನಾ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳೇನಾದರೂ ಇದ್ದಲ್ಲಿ ಅರ್ಜಿ ಮೂಲಕ ಸಲ್ಲಿಸಬಹುದಾಗಿದೆ ಎಂದು ಬಳ್ಳಾರಿ ತಹಸೀಲ್ದಾರರು ತಿಳಿಸಿದ್ದಾರೆ.
ಒಕ್ಕೂಟದಿಂದ ರೈತರಿಗೆ ಸಾಲ
ಬಳ್ಳಾರಿ: ಗುಣಮಟ್ಟದ ಹಾಲು ಶೇಖರಿಸಲು ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು ಒಕ್ಕೂಟದಿಂದ ರೈತರಿಗೆ ವಿವಿಧ ರೀತಿಯ ಸಾಲ-ಸೌಲಭ್ಯ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರರೆಡ್ಡಿ ಹೇಳಿದರು. ತಾಲೂಕಿನ ಕೃಷ್ಣಾನಗರ ಕ್ಯಾಂಪ್ನಲ್ಲಿ ಶುಕ್ರವಾರ ಕೃಷ್ಣಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಮಾತನಾಡಿದ ಅವರು, ಒಕ್ಕೂಟದಿಂದ ಪಶು ಆಹಾರ, ಖನಿಜ ಮಿಶ್ರಣ, ಕೃತಕ ಗರ್ಭಧಾರಣೆ, ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಷನ್ ಯುನಿಟ್, ಮಿಲ್ಕಿಂಗ್ ಮಷಿನ್ಗಾಗಿ ನೀಡುವ ಸಾಲ ಸೌಲಭ್ಯಗಳನ್ನು ಪಡೆದು ರೈತರು ಗುಣಮಟ್ಟದ ಹಾಲು ಶೇಖರಿಸಬೇಕು. ಒಕ್ಕೂಟದ ಆವರಣದಲ್ಲಿ 10 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಐಸ್ಕ್ರೀಂ ತಯಾರಿಕಾ ಘಟಕವನ್ನು ಜೂನ್ 21ರಂದು ಉದ್ಘಾಟಿಸಲಾಗುವುದು. ರಾಜ್ಯದ ಮುಖ್ಯಮಂತ್ರಿಗಳು ಹಾಲು ಉತ್ಪಾದಕರ ಸಹಾಯಧನವನ್ನು 2 ನಿಂದ 4ಗೆ ಹೆಚ್ಚಿಸಿರುವುದು ಅಭಿನಂದನಾರ್ಹ ಎಂದರು. ರಾಬಕೊ ಹಾಲು ಒಕ್ಕೂಟದ ಅಧ್ಯಕ್ಷ ಎಂ. ಸತ್ಯನಾರಾಯಣ ಮಾತನಾಡಿದರು. ಕೃಷ್ಣಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟೇಶ್ವರರಾವ್, ರಾಬಕೊ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಸುರೇಶ್ಕುಮಾರ್, ಧನಂಜಯ, ಗ್ರಾಪಂ ಸದಸ್ಯ ಸತ್ಯನಾರಾಯಣ, ಆಡಳಿತ ಮಂಡಳಿ ಸದಸ್ಯರು ಇದ್ದರು. ರಾಮಬಾಬು ವರದಿ ವಾಚನ ಮಾಡಿದರು. ಯರ್ರಿಸ್ವಾಮಿ ಸ್ವಾಗತಿಸಿದರು.
ನಾಳೆ ರಕ್ತದಾನ ಶಿಬಿರ
ಬಳ್ಳಾರಿ: ಭಾರತೀಯ ರೆಡ್ಕ್ರಾಸ್, ವಿಮ್ಸ್ ಹಾಗೂ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಜೂ. 2ರಂದು ಬೆಳಗ್ಗೆ 9.30ಕ್ಕೆ ನಗರದ ವಿಮ್ಸ್ನ ರಕ್ತ ನಿಧಿ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿಮ್ಸ್ ನಿರ್ದೇಶಕ ಡಾ. ಲಕ್ಷ್ಮೀ ನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ. ನಾಗರಾಜ್ರಾವ್ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಕೊಟ್ಟೂರು: ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಒದಗಿಸಲು ಮುಂದಾಗಿರುವ ರಾಜ್ಯ ಕಳ್ಳು-ಬಳ್ಳಿ ಸಂಸ್ಥೆ ಶೇ. 75ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಎಲ್ಲ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಎಂ.ಎಂ.ಜೆ. ಸ್ವರೂಪಾನಂದ ಮೊ. 9448431339, ಜೆ.ಎಂ. ಸಿದ್ದಲಿಂಗಯ್ಯ ಮೊ. 9448719391 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

