ಗಡಿ ಭಾಗದ ಶಾಲೆಗಳಿಗೆ ಸೌಕರ್ಯ ಒದಗಿಸಿ
ಬಳ್ಳಾರಿ: ಗಡಿ ಭಾಗದ ಕನ್ನಡ ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಪಠ್ಯ, ಪುಸ್ತಕಗಳೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ವೀವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ ಆಗ್ರಹಿಸಿದರು.
ನೆರೆಯ ಆಂಧ್ರದ ಗಡಿಗ್ರಾಮ ಡಿ. ಹಿರೇಹಾಳ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪಡಿಸಿದ್ದ ಕೆ.ಎಸ್. ನರಸಿಂಹಸ್ವಾಮಿ ಕವಿ ಕಾವ್ಯ, ಗಾಯನ ಚಿಂತನ ಮಾಲೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.
ಗಡಿ ಭಾಗದಲ್ಲಿ ಕನ್ನಡದ ಕುರಿತು ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು. ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಮನವಿ ಮಾಡಿದರು.
ಅಧ್ಯಾಪಕ ಡಾ. ಮುದ್ದವೀರಪ್ಪ ಕೊರಟಗೆರೆ ಅವರು ಕೆ.ಎಸ್. ನರಸಿಂಹಸ್ವಾಮಿ ಕುರಿತು ಉಪನ್ಯಾಸ ನೀಡಿದರು. ಹೊನ್ನೂರಸ್ವಾಮಿ 10ನೇ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಆಂಧ್ರದ ಗಡಿನಾಡ ಘಟಕದ ಅಧ್ಯಕ್ಷ ಎಚ್.ಬಿ. ಶಿವಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಎರ್ರಿಸ್ವಾಮಿ, ಗ್ರಾಪಂ ಸದಸ್ಯೆ ಲಕ್ಷ್ಮೀದೇವಿ ಇತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ವೆಂಕಟೇಶಲು, ತಿಮ್ಮಾರೆಡ್ಡಿ, ಜಿ. ಮೋಹನ್, ದೇವಾ, ಜಿ. ರತ್ನಾಕರ ಇತರರಿದ್ದರು. ಗಡಿನಾಡ ಕನ್ನಡ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಗಿರಿಜಾಪತಿ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

