10, 11ರಂದು ಬಿಜೆಪಿ ಕಾರ್ಯಕಾರಿಣಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 7
ಭಾರತೀಯ ಜನತಾ ಪಕ್ಷದ ಎಸ್ಟಿ ಮೋರ್ಚಾದ ಕಾರ್ಯಕಾರಿಣಿ ಸಭೆ ನ. 10 ಮತ್ತು 11ರಂದು ಚಾಮರಾಜನಗರದಲ್ಲಿ ಜರುಗಲಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ನ. 17ರಂದು ನಡೆಯಲಿರುವ ಬಿಜೆಪಿ ಪ್ರಧಾನ ಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿ ಹಿನ್ನೆಲೆಯಲ್ಲಿ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಇತರೆ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪ್ರತ್ಯೇಕ ಸಚಿವಾಲಯ: ಕೇಂದ್ರದ ಮಾದರಿಯಲ್ಲೇ ರಾಜ್ಯದಲ್ಲೂ ಎಸ್ಟಿ ಜನಾಂಗಕ್ಕೆ ಶೇ. 7.5 ಮೀಸಲಾತಿ ಜಾರಿಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ಬೇರ್ಪಡಿಸಿ ಎಸ್ಟಿ ಜನಾಂಗಕ್ಕೆ ಪ್ರತ್ಯೇಕ ಸಚಿವಾಲಯ ಅಸ್ತಿತ್ವಗೊಳಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಕೈಗೊಂಡ ನಿರ್ಣಯಗಳಂತೆ ಹೋಬಳಿ, ತಾಲೂಕು, ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಸ್ಟಿ ಜನಾಂಗವನ್ನು ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದಾನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ, ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಮುಖಂಡರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದರು.
ಪದಾಧಿಕಾರಿಗಳ ನೇಮಕ: ಇದೇ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕಕ್ಕೆ ನೇಮಕವಾದ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಉಪಾಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಶಾಸಕ ತಿಪ್ಪರಾಜು, ಬೆಂಗಳೂರಿನ ಕೆ.ವಿ. ನಾಗೇಂದ್ರ, ಬಂಟ್ವಾಳದ ರುಕ್ಮಯ್ಯ ನಾಯಕ್, ಧಾರವಾಡದ ಕಲ್ಮೇಶ್ ಹಾವೇರಿ ಪೇಟ್, ದಾವಣಗೆರೆಯ ಡಾ. ಅರುಣ್ಕುಮಾರ್, ಬೆಳಗಾವಿ ಯಮಕನಮರಡಿಯ ಮಾರುತಿ ಮಲ್ಲಪ್ಪ ಅಷ್ಟಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಹಾವೇರಿಯ ಮಂಜುನಾಥ್ ಓಲೇಕಾರ್, ಚಾಮರಾಜನಗರದ ಆರ್. ಸುಂದರ್, ಕಾರ್ಯದರ್ಶಿಗಳಾಗಿ ಚಿಕ್ಕಬಳ್ಳಾಪುರದ ಜಯಲಕ್ಷ್ಮಮ್ಮ, ಹೊಸಪೇಟೆಯ ಬಿ. ಆನಂದ್, ಬೀದರ್ ನಾರಾಯಣ ರಾಂಪುರೆ, ಬಿಳಿಗಿರಿ ರಂಗನಬೆಟ್ಟದ ಕುನ್ನೂರೇಗೌಡ, ಬಿಜಾಪುರದ ಬಾಲಚಂದ್ರ ನಾಗರಹಾಳ, ಕೋಶಾಧ್ಯಕ್ಷರಾಗಿ ಮೈಸೂರಿನ ಎಂ. ಸತೀಶ್ ಆಯ್ಕೆಯಾಗಿದ್ದಾರೆ ಎಂದರು.
ಪಕ್ಷದ ಕೆ.ಎ. ರಾಮಲಿಂಗಪ್ಪ, ರಾಮಚಂದ್ರಯ್ಯ, ಜಿಲ್ಲಾ ಕಾರ್ಯದರ್ಶಿ ಮುರಹರಿಗೌಡ, ಶಿವಾರೆಡ್ಡಿ, ಎಚ್. ಹನುಮಂತಪ್ಪ, ಸುಗುಣಾ, ಶಿವಕೃಷ್ಣಮ್ಮ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

