ಕೊಲೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಒತ್ತಾಯ
ಸಿರುಗುಪ್ಪ: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಸೌಜನ್ಯಾ ಮತ್ತು ಪದ್ಮಲತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ, ಸಿಪಿಐಎಂ ಹಾಗೂ ಸಿಐಟಿಯು ಸಮಿತಿಯ ಕಾರ್ಯಕರ್ತರು ಗುರುವಾರ ತಾಲೂಕಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಿಐಟಿಯು ಅಧ್ಯಕ್ಷ ಬಿ.ಎಲ್. ಈರಣ್ಣ ಈ ಸಂದರ್ಭ ಮಾತನಾಡಿ, ಮಹಿಳೆಯರ ಮೇಲಿನ ಆತ್ಯಾಚಾರ ಹಾಗೂ ಕೊಲೆ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳಲ್ಲಿ ನಿಜವಾದ ಆರೋಪಿಗಳು ಪತ್ತೆಯಾಗದೆ ಇರುವುದು ವಿಷಾದನೀಯ ಸಂಗತಿ, ಕೆಲವೊಂದು ಪ್ರಕರಣಗಳಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡದಿಂದ ಆರೋಪಿಗಳು ಮಾಡಿದ ತಪ್ಪಿನಿಂದ ನುಣುಚಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಇಂದಿಗೂ ಆತ್ಯಾಚಾರ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು.
ನಂತರ ಸಿಪಿಐಎಂ ಹಾಗೂ ಸಿಐಟಿಯು ಸಮಿತಿಯ ಕಾರ್ಯಕರ್ತರು ಉಪತಹಸೀಲ್ದಾರ್ ಬಿ. ಮಲ್ಲೇಶಪ್ಪರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಬಿ. ಸುರೇಶ, ಎಚ್. ತಿಪ್ಪಯ್ಯ, ಲತೀಫ್ ಖಾಜಾ, ಉಮಾದೇವಿ, ಎಸ್. ವರಲಕ್ಷ್ಮಿ, ರಾಜಶೇಖರಗೌಡ, ಸುಬ್ಬರೆಡ್ಡಿ, ರಾಜಾಸಾಬ್, ಮಸ್ತಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

