ಬಳ್ಳಾರಿ

ಸೌಲಭ್ಯ ನೀಡಿದರೂ ಅಭಿವೃದ್ಧಿ ಕುಂಠಿತ

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ ನ. 9
ಸರ್ಕಾರ ನೂರಾರು ಯೋಜನೆಗಳ ಮೂಲಕ ಲಂಬಾಣಿ ಜನಾಂಗಕ್ಕೆ ಸಾಕಷ್ಟು ಸೌಲಭ್ಯ ನೀಡಿದ್ದರೂ ತಾಂಡಾಗಳ ಅಭಿವೃದ್ಧಿಯಲ್ಲಿ ಹಿನ್ನಡೆ ಕಂಡಿದೆ ಎಂದು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರನಾಯ್ಕ ವಿಷಾದ ವ್ಯಕ್ತಪಡಿಸಿದರು.
ತಾಲೂಕಿನ ಡೊಂಬ್ರಹಳ್ಳಿ ತಾಂಡಾದಲ್ಲಿ ಶನಿವಾರ ನೂತನ ಸೇವಾಲಾಲ್ ದೇವಸ್ಥಾನ ಉದ್ಘಾಟಿಸಿ ಮಾತನಾಡಿದರು. ಲಂಬಾಣಿ ಸಮುದಾಯಗಳಲ್ಲಿ ಬಹುತೇಕರು ಕೆಟ್ಟ ಹವ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ನಿರುಪಯುಕ್ತವಾಗುತ್ತಿವೆ ಎಂದರು.
ತಾಂಡಾದ ಜನತೆ ಉತ್ತಮ ಜೀವನಕ್ಕಾಗಿ ಶಿಕ್ಷಣ ಪಡೆಯಬೇಕು. ಆ ಮೂಲಕ ಸಮಾಜದಲ್ಲಿ ಮುಖ್ಯವಾಹಿನಿಗೆ ಬರುವಂತೆ ಸಲಹೆ ನೀಡಿದ ಅವರು, ಇದೇ ವೇಳೆ ಡೊಂಬ್ರಹಳ್ಳಿ ಕ್ರಾಸ್‌ನಿಂದ ದೇವಸ್ಥಾನದವರೆಗೆ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದಕ್ಕೂ ಮುನ್ನ ಹೊಸ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳಿಂದ ಶ್ರೀಧರ ಮೂರ್ತಿ ಇವರಿಂದ ಮೂರ್ತಿಗೆ ಹೋಮ ಹವನಗಳಿಂದ ಪೂಜೆ ಸಲ್ಲಿಸಲಾಯಿತು. ಅನಂತರ ದೇವಸ್ಥಾನವನ್ನು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಉದ್ಘಾಟಿಸಿದರು.
ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ತಾಪಂ ಅಧ್ಯಕ್ಷೆ ಶಿಲ್ಪಾ ಸಿಂಗ್ ರಾಠೋಡ್, ಜಿಪಂ ಮಾಜಿ ಸದಸ್ಯ ಬಸವನಗೌಡ ಸೇರಿದಂತೆ ಇತರರಿದ್ದರು. ಜಂಗಮ ಕ್ಷೇತ್ರ ಲಿಂಗನಾಯ್ಕನಹಳ್ಳಿಯ ಶ್ರೀ ಚನ್ನವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.