ಜ್ಞಾನ, ವಿಜ್ಞಾನ ಮನುಷ್ಯನ ಕಣ್ಣುಗಳು
ಹೊಸಪೇಟೆ: ಜ್ಞಾನ ಮತ್ತು ವಿಜ್ಞಾನ ಎರಡು ಕಣ್ಣುಗಳಂತೆ ಮನುಷ್ಯನಿಗೆ ಅಗತ್ಯವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಟಿ.ಎನ್. ಪ್ರಭಾಕರ ಹೇಳಿದರು.
ನಗರದ ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಪದವಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನದ ಅವಿಷ್ಕಾರಗಳು ಹೆಚ್ಚಾಗಿ ವಿದೇಶಗಳಲ್ಲೇ ಆಗಿವೆ ಎಂಬ ಭಾವನೆಯನ್ನು ನಮ್ಮ ಪಠ್ಯ ಪುಸ್ತಕಗಳು ಬಿಂಬಿಸುತ್ತಿವೆ. ಆದರೆ, ವಿಜ್ಞಾನಕ್ಕೆ ಪ್ರಾಚೀನ ಭಾರತೀಯರ ಕೊಡುಗೆ ಮಹತ್ವದ್ದಾಗಿದ್ದು, ನಮ್ಮ ಮಕ್ಕಳಿಗೆ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಳ್ಳಾರಿಯ ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಮಾತನಾಡಿ, ವೈಜ್ಞಾನಿಕ ಮನೋಭಾವ ಬೆಳಸುವ ಕಾರ್ಯಕ್ರಮಗಳು ಹಿಂದುಳಿದ ಹೈ-ಕ ಭಾಗದಲ್ಲಿ ಹೆಚ್ಚಾಗಿ ನಡೆಯಬೇಕು ಎಂದು ತಿಳಿಸಿದರು.
ಬಳ್ಳಾರಿ ವೀ.ವಿ. ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ, ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂ ಸ್ವಾಧೀನಾ ಧಿಕಾರಿ ಬಿ.ಆರ್. ಸೋಮಣ್ಣನವರ್ ಮಾತನಾಡಿದರು. ಪ್ರೊ. ಎಸ್.ವಿ. ಸಂಕನೂರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಪಿಡಿಐಟಿ ಆಡಳಿತ ಮಂಡಳಿ ಅಧ್ಯಕ್ಷ ಅರವಿ ಬಸವನಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜು ಪ್ರಾಚಾರ್ಯ ಪ್ರೊ. ಪಾರ್ವತಿ ಕಡ್ಲಿ ಸ್ವಾಗತಿಸಿದರು. ಕರಾವಿಪ ಸಂಯೋಜಕ ಡಾ. ಕುಂಟೆಪ್ಪ ಗೌರಿಪುರ ಪ್ರಾಸ್ತಾವಿಕ ಮಾತನಾಡಿದರು. ಎಸ್.ಎಂ. ಕೊಟ್ರಸ್ವಾಮಿ ವಂದಿಸಿದರು.
ಪ್ರಭುರಾಜ ಪಾಟೀಲ ನಿರೂಪಿಸಿದರು. ಪಿಡಿಐಟಿಯ ಅಧ್ಯಾಪಕರಾದ ಪ್ರಭುರಾಜ ಪಾಟೀಲ, ಡಾ. ಎನ್.ಎಂ.ನಾಗಭೂಷಣ, ಮಧ್ವರಾಜ, ಸಂಗಮೇಶ, ಮಾಲತೇಶ, ಡಾ. ವೀರಬಸವಂತಸ್ವಾಮಿ ನಿರ್ವಹಿಸಿದರು.
ಉದ್ಘಾಟನೆ ನಂತರ ಪಕ್ಷಿತಜ್ಞ ಕೆ.ಎಸ್. ಅಬ್ದುಲ್ ಸಮದ್ ಅವರು ಅಳಿವಿನಂಚಿನಲ್ಲಿರುವ ವನ್ಯಜೀವಿಗಳ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು.
ಮಂಗಳೂರು, ಉಡುಪಿ, ಗುಲ್ಬರ್ಗಾ, ಬೆಳಗಾವಿ, ಬಳ್ಳಾರಿ, ಕೊಪ್ಪಳ ಇತರೆ ಜಿಲ್ಲೆಗಳಿಂದ ಸುಮಾರು 30ಕ್ಕೂ ಹೆಚ್ಚು ಪದವಿ ವಿದ್ಯಾರ್ಥಿಗಳ ತಂಡಗಳು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

