ಬಳ್ಳಾರಿ

ಇಂದು 4 ಜಿಲ್ಲೆಗಳ ರೈತ ಸಮಾವೇಶ

Published On :

ಬಳ್ಳಾರಿ:  ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನ. 12ರಂದು ಸಿಂಧನೂರಿನಲ್ಲಿ ಐದು ಜಿಲ್ಲೆಗಳ ರೈತರ ಸಮಾವೇಶ ಹಮ್ಮಿಕೊಂಡಿದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಪುರುಷೋತ್ತಮಗೌಡ  ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬತ್ತ, ಹತ್ತಿ ಮತ್ತು ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿರುವುದರೊಂದಿಗೆ ನೀರಿನ ಮಟ್ಟ ಕುಸಿದು ಮುಂದಿನ ದಿನಗಳಲ್ಲಿ ರೈತರ ಜಮೀನುಗಳಿಗೆ ನೀರು ದೊರೆಯುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಸಂಘ ಬಳ್ಳಾರಿ, ಕೊಪ್ಪಳ, ದಾವಣಗೆರೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ರೈತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷ ಚಾಮರಸ್ ಮಾಲೀಪಾಟೀಲ್, ಕರ್ನಾಟಕ ರಾಜ್ಯ ರೈತ ಸಂಘದ ಏಕೈಕ ಶಾಸಕ ಪುಟ್ಟಣಯ್ಯ, ಆಂಧ್ರ ಪ್ರದೇಶದ ರಾಜ್ಯ ರೈತ ಸಂಘದ ಅಧ್ಯಕ್ಷರು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಸಿಂಧನೂರು ಶಾಸಕರು, ರಾಜ್ಯದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಘದ ಐದು ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ನಿಟ್ಟಿನಲ್ಲಿ ಜಿಲ್ಲೆಯ ರೈತರೆಲ್ಲರೂ ಸಮಾವೇಶಕ್ಕೆ ಆಗಮಿಸಿ, ನಮ್ಮ ಅಹವಾಲನ್ನು ಸರ್ಕಾರಕ್ಕೆ ತಲುಪಿಸಬೇಕು ಎಂದು ಜಿ. ಪುರುಷೋತ್ತಮಗೌಡ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.