ಬಿಡಿಸಿಸಿ ಬ್ಯಾಂಕ್ ಚುನಾವಣೆ: ಐವರು ನಿರ್ದೇಶಕರ ಮರು ಆಯ್ಕೆ
ಹೊಸಪೇಟೆ: ನಗರದ ಬಿಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಭಾನುವಾರ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆಯಿತು. ಬ್ಯಾಂಕ್ನ ಒಟ್ಟು 10 ಕ್ಷೇತ್ರಗಳಲ್ಲಿ ಈಗಾಗಲೇ 5 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 5 ಸ್ಥಾನಗಳಿಗೆ ನಡೆದ ಚುನಾವಣೆ ನಂತರ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ರಮೇಶ್ ಕೋನರೆಡ್ಡಿ ಫಲಿತಾಂಶ ಪ್ರಕಟಿಸಿದರು.
ಬಳ್ಳಾರಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಡಿ. ಭೋಗಾರೆಡ್ಡಿ 10 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬೇರ್ಗಿ ಮಹೇಶ್ ಗೌಡ 6 ಮತಗಳನ್ನು ಪಡೆದು ಸೋತಿದ್ದಾರೆ.
ಸಿರುಗಪ್ಪ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಟಿ.ಎಂ. ಚಂದ್ರಶೇಖರಯ್ಯ 20 ಮತಗಳನ್ನು ಪಡೆದು ಗೆದ್ದರೆ, ಚೊಕ್ಕ ಬಸವನಗೌಡ 8 ಮತಗಳನ್ನು ಪಡೆದು ಫರಾಭವಗೊಂಡಿದ್ದಾರೆ. ಟಿಎಪಿಸಿಎಂಎಸ್ ಕ್ಷೇತ್ರದಿಂದ ಎಂ. ಗುರುಸಿದ್ದನಗೌಡ 4 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬಂಡೆ ರಂಗಪ್ಪ 2 ಮತ ಸೋತಿದ್ದಾರೆ.
ಪಟ್ಟಣ ಬ್ಯಾಂಕ್ಗಳು ಮತ್ತು ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೋಳೂರು ಮಲ್ಲಿಕಾರ್ಜುನಗೌಡ 23 ಮತಗಳನ್ನು ಪಡೆದು ಗೆದ್ದರೆ ಎಲ್.ಎಸ್. ಆನಂದ್ 16 ಮತಗಳನ್ನು ಪಡೆದು ಸೋತಿದ್ದಾರೆ.
ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ. ಗಾದೆಪ್ಪ 151 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅನಿಲ್ ಜೋಶಿ 50 ಹಾಗೂ ಆರ್. ಮಾಧವ ರೆಡ್ಡಿ 26 ಮತಗಳನ್ನು ಪಡೆದುಕೊಂಡು ಸೋತಿದ್ದಾರೆ.
ಅವಿರೋಧ ಆಯ್ಕೆ: ಹೂವಿನಹಡಗಲಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಪಿ. ರವೀಂದ್ರ, ಸಂಡೂರು ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಜೆ.ಎಂ. ವೃಷಭೇಂದ್ರಯ್ಯ, ಹಗರಿಬೊಮ್ಮನಹಳ್ಳಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಾತಿ ಚೌಡಪ್ಪ, ಹೊಸಪೇಟೆ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ. ಚಂದ್ರಶೇಖರ್, ಕೂಡ್ಲಿಗಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕ್ಷೇತ್ರದಿಂದ ಕೆ.ಎಂ. ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಾಯಕ ಚುನಾವಣಾಧಿಕಾರಿಯಾಗಿ ಡಾ. ಜಿ. ಉಮೇಶ್ ಭಾಗವಹಿಸಿದ್ದರು. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಡಿಸಿಸಿ ಬ್ಯಾಂಕ್ ಆವರಣದಲ್ಲಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬ್ಯಾಂಕ್ ಅಭಿವೃದ್ದಿಗೆ ಬದ್ಧ
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ 5 ವರ್ಷಗಳ ಕಾಲ ಸ್ವಚ್ಛ ಆಡಳಿತ ನಡೆಸಿದಕ್ಕಾಗಿ ನಮ್ಮ 10 ಜನ ನಿರ್ದೇಶಕರನ್ನು ಪುನರ್ ಆಯ್ಕೆ ಮಾಡಿದ್ದಾರೆ. ಜನ ನೀಡಿದ ಅಧಿಕಾರವನ್ನು ಪ್ರಾಮಾಣಿಕವಾಗಿ ಬಳಸಿ ಬ್ಯಾಂಕ್ ಅಭಿವೃದ್ದಿಗೆ ಶ್ರಮಿಸುತ್ತೇವೆ ಎಂದು ಬಿಡಿಸಿಸಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಮತ್ತು ಹರಪನಹಳ್ಳಿ ಕ್ಷೇತ್ರದ ಶಾಸಕ ಎಂ.ಪಿ. ರವೀಂದ್ರ ಹೇಳಿದರು. ನಗರದ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಡಿಸಿಸಿ ಬ್ಯಾಂಕ್ನಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರೈತರಿಗೆ ರು. 175 ಕೋಟಿ ಬೆಳೆ ಸಾಲ ನೀಡಲಾಗಿದ್ದು, ಈ ಬೆಳೆ ಸಾಲವನ್ನು ರು. 200ಗೆ ವಿಸ್ತರಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

