ಶಾದಿಭಾಗ್ಯ ವಿಸ್ತರಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 11
ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಜಾರಿ ಮಾಡಿರುವ ಶಾದಿಭಾಗ್ಯ ಯೋಜನೆಯನ್ನು ಎಲ್ಲ ಧರ್ಮಗಳ ಬಡವರಿಗೆ ವಿಸ್ತರಿಸಬೇಕು ಮತ್ತು ಎಪಿಎಲ್ ಪಡಿತರ ಚೀಟಿದಾರರಿಗೂ ಪಡಿತರ ಧಾನ್ಯ ನೀಡಬೇಕು ಎಂದು ಆಗ್ರಹಿಸಿ ಕೆಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕೆಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಡರ್ಬ್ರಿಡ್ಜ್ ಮೂಲಕ ಗಡಿಗಿ ಚನ್ನಪ್ಪ ವೃತ್ತ, ನಗರ ಪಾಲಿಕೆ ಕಚೇರಿ ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದ ಪ್ರತಿಭಟನಾಕಾರರು ಅಲ್ಲಿ ಕೆಲ ಕಾಲ ಧರಣಿ ನಡೆಸಿದರು.
ಕೆಜೆಪಿ ರಾಜ್ಯ ಕಾರ್ಯದರ್ಶಿ ಬಿ.ಕೆ. ಗಾದಿಲಿಂಗನಗೌಡ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಧರಣಿ ನಡೆಸುತ್ತಿದ್ದರೂ ಸರ್ಕಾರದ ಯಾವೊಬ್ಬ ಸಚಿವರಾಗಲಿ, ಮುಖ್ಯಮಂತ್ರಿಯಾಗಲಿ ಇಲ್ಲಿ ವರೆಗೆ ಸ್ಪಂದಿಸದೇ ಇರುವುದು ಖಂಡನೀಯ. ಅವರ ಧರಣಿಯನ್ನು ಬೆಂಬಲಿಸಿ ಹಾಗೂ ಸರ್ಕಾರದ ಧೋರಣೆ ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ಶಾದಿಭಾಗ್ಯ ಯೋಜನೆ ಎಲ್ಲ ಜಾತಿ-ಧರ್ಮಗಳ ಬಡ ಹೆಣ್ಣುಮಕ್ಕಳಿಗೂ ತಲುಪಬೇಕು ಹಾಗೂ ಅನ್ನಭಾಗ್ಯ ಯೋಜನೆಯಿಂದಾಗಿ ಈ ಹಿಂದೆ ಎಪಿಎಲ್ ಪಡಿತರ ಕಾರ್ಡುದಾರರಿಗೂ ವಿತರಿಸುತ್ತಿದ್ದ ಆಹಾರ ಧಾನ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಎಪಿಎಲ್ ಕಾರ್ಡ್ದಾರರಿಗೂ ಪಡಿತರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಒಂದು ವೇಳೆ ಈ ಬಗ್ಗೆ ಕ್ರಮಕೈಗೊಳ್ಳದೇ ಹೋದಲ್ಲಿ ರಾಜ್ಯವ್ಯಾಪಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಜೆಪಿ ಜಿಲ್ಲಾಧ್ಯಕ್ಷ ಆಲೇಶ್ವರ ಗೌಡ, ಹಡಗಲಿಯ ಮಧುನಾಯ್ಕ್, ಸಂಡೂರಿನ ರವಿಪ್ರಕಾಶ್, ಮೋಕಾದ ವಿ. ಪಾಂಡು, ಮುಖಂಡರಾದ ಪಾರ್ಥಸಾರಥಿ, ಸೊಪ್ಪಿನ ವೀರಣ್ಣ, ಜಯಗೌಡ, ರಮೇಶ್, ಕೆಂಚಪ್ಪ, ಶಿವಕುಮಾರ್, ರವಿ, ಸಿದ್ದರಾಜು, ಖಾದರ್ಭಾಷಾ, ಮೆಹಬೂಬ್ಭಾಷಾ, ರಾಮಕೃಷ್ಣ, ಶ್ರೀನಿವಾಸ ಪಾಟೀಲ್, ಪುರುಷೋತ್ತಮ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

