ಬಳ್ಳಾರಿ

ಕೆರೆ ಭರ್ತಿಗೆ ಅನುದಾನ: ಸಚಿವ ಪಿಟಿಪಿ ಸಾಧನೆ ಅಲ್ಲ

Published On :

ಹೂವಿನಹಡಗಲಿ: ತಾಲೂಕಿನ 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬಿಜೆಪಿ ಸರ್ಕಾರದ ಗುಲ್ಬರ್ಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತು ಅಗತ್ಯ ಅನುದಾನವೂ ಬಿಡುಗಡೆಯಾಗಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ಸರ್ಕಾರ ಸಾಧನೆ ಎಂದು ಹೇಳಿಕೊಳ್ಳುವ ಯಾವುದೇ ನೈತಿಕತೆ ಇಲ್ಲ. ಬೇಕಾದರೆ ದಾಖಲೆಯನ್ನು ಬಹಿರಂಗ ಪಡಿಸಲಿ ಎಂದು ಮಾಜಿ ಶಾಸಕ ಬಿ. ಚಂದ್ರನಾಯ್ಕ ಸವಾಲು ಹಾಕಿದ್ದಾರೆ.
ಪಟ್ಟಣದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹೊಳಲು ಗ್ರಾಮದಲ್ಲಿ ವಿವಿಧ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ, 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಅಂಕಿತ ಹಾಕಿ ರೈತಪರ ಕಾಳಜಿ ಮೆರೆದಿದ್ದಾರೆ ಎಂದು ಹೇಳಿದ ಹಿನ್ನೆಲೆಯಲ್ಲಿ ತಿರುಗೇಟು ನೀಡಿದ್ದಾರೆ.
ಸಚಿವರಿಗೆ ಜನಪರ ಕಾಳಜಿ ಇದ್ದರೆ ಅನುದಾನ ತಂದು ಅಭಿವೃದ್ಧಿ ಮಾಡಿಸಲಿ. ಅದು ಬಿಟ್ಟು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನಕ್ಕೆ ಭೂಮಿಪೂಜೆ, ಶಂಕುಸ್ಥಾಪನೆ, ಉದ್ಘಾಟನೆ ಮಾಡುತ್ತ, ಸಿಎಂ ಕಾಲಿಗೆ ಬಿದ್ದು ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳುತ್ತ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಸರ್ಕಾರದಿಂದ ಈವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿಸಿಲ್ಲ. ಈ ಕಾಮಗಾರಿಗಳು ಹಿಂದಿನ ಬಿಜೆಪಿ ಸರ್ಕಾರದ್ದು ಎಂದು ಹೇಳುತ್ತಿರುವುದನ್ನು ಸ್ವಾಗತಿಸಿಸುವುದಾಗಿ ಹೇಳಿದರು.
ಕ್ಷೇತ್ರದ ಅನೇಕ ಕಾಮಗಾರಿಗಳಿಂದ ಸಚಿವರಿಗೆ ಕಮಿಷನ್ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿವೆ. 10 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಸಿಎಂ ಜಗದೀಶ ಶೆಟ್ಟರ್ ಶಂಕುಸ್ಥಾಪನೆ ಮಾಡಿದ್ದರು. ಡಿಪ್ಲೋಮಾ ಕಾಲೇಜು, ಕಸ್ತೂರಬಾ ಗಾಂಧಿ ವಸತಿ ನಿಲಯ, ಅಲ್ಪ ಸಂಖ್ಯಾತರ ವಸತಿ ನಿಲಯ, ಕೃಷಿ ವಿಸ್ತರಣಾ ಘಟಕ ಕಟ್ಟಡ, ಮೊರಾರ್ಜಿ ದೇಸಾಯಿ ವಸತಿ ಶಾಲೆ, 100 ಹಾಸಿಗೆ ಆಸ್ಪತ್ರೆ, ಅನೇಕ ಸುಕ್ಷೇತ್ರಗಳಲ್ಲಿನ ಯಾತ್ರಾ ನಿವಾಸಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗಿದ್ದರೂ ಈವರೆಗೂ ಕಾಮಗಾರಿ ಆರಂಭಿಸಲು ಸಚಿವರು ಹಿಂದೇಟು ಹಾಕುತ್ತಿರುವ ಹಿಂದಿನ ಮರ್ಮವೇನು ಜನರಿಗೆ ಬಹಿರಂಗವಾಗಿ ತಿಳಿಸಲಿ ಎಂದು ಸವಾಲು ಹಾಕಿದರು.
ಟಿಸಿ ಸುಟ್ಟ ಪರಿಣಾಮ ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ರೈತರಿಗೆ ನೀರಿಲ್ಲ. ಅಧಿಕಾರಿಗಳು ಮತ್ತು ಸಚಿವರು ಗಮನ ಹರಿಸದೇ ನಿರ್ಲಕ್ಷ್ಯ ತಾಳಿದ್ದಾರೆ. 3 ತಿಂಗಳ ಹಿಂದೆ ಸುಟ್ಟಿರುವ ಟಿಸಿ ಹಾಕಿಸಲು ಸಚಿವರಿಗೆ ಆಗುತ್ತಿಲ್ಲ. ಇದೇ ರೀತಿ ಸಚಿವರು ನಿರ್ಲಕ್ಷ್ಯ ತಾಳಿದರೆ ರೈತರ ಪರ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ವಕ್ತಾರ ಎಂ.ಬಿ. ಬಸವರಾಜ, ಸಂಜೀವರೆಡ್ಡಿ, ಎಚ್. ಪೂಜೆಪ್ಪ, ತಾಲೂಕು ಘಟಕದ ಅಧ್ಯಕ್ಷ ಎಂ. ಬಸಣ್ಣ, ಬೀರಬ್ಬಿ ಬಸವರಾಜ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.