ಬಳ್ಳಾರಿ

ಸೌಲಭ್ಯ ಒದಗಿಸಲು ಪಪಂ ಮುಖ್ಯಾಧಿಕಾರಿ ವಿಫಲ: ಆರೋಪ

Published On :

ಕೊಟ್ಟೂರು:  ಇಲ್ಲಿನ ಪಟ್ಟಣ ಪಂಚಾಯಿತಿಯ ಎಸ್‌ಎಫ್‌ಸಿ 22.75 ಮತ್ತು 3ರ ಅನುದಾನದಡಿ ಪರಿಶಿಷ್ಟ ಜಾತಿಯ ಅಂಗವಿಕಲರಿಗೆ ನೀಡುವ ಆರ್ಥಿಕ ನೆರವು, ವೈಯಕ್ತಿಕ ಶೌಚಾಲಯ ಮತ್ತಿತರ ಸೌಲಭ್ಯಗಳ ಮಂಜೂರಾತಿಗೆ ಸರ್ಕಾರ ಹಣಬಿಡುಗಡೆಗೊಳಿಸಿದೆ. ಆದರೆ ಮುಖ್ಯಾಧಿಕಾರಿ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಒದಗಿಸಿಕೊಡಲು  ವಿಫಲರಾಗಿದ್ದಾರೆ ಎಂದು ಡಿಎಸ್‌ಎಸ್ ಕಾರ್ಯಕರ್ತ ಕೆ.ಎಚ್. ವೀರಭದ್ರಪ್ಪ ಆರೋಪಿಸಿದ್ದಾರೆ.
ಈ ಅನುದಾನದಡಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪುಸ್ತಕದ ಸೌಲಭ್ಯ, ರೋಗಿಗಳ ಸೂಕ್ತ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲು ಅವಕಾಶಗಳಿವೆ. ಫಲಾನುಭವಿಗಳಿಗೆ ಸೂಕ್ತ ಸಂದರ್ಭದಲ್ಲಿ ಈ ಆರ್ಥಿಕ ನೆರವು ದೊರಕಿಸಿಕೊಡಲು ಮುಖ್ಯಾಧಿಕಾರಿ ವಿಳಂಬ ನೀತಿ ಅನುಸರಿಸುತ್ತಿದ್ದರೂ ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಸದಸ್ಯರು ಸುಮ್ಮನಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಟ್ಟಾರೆಯಾಗಿ ಜನಪ್ರತಿನಿಧಿಗಳು ಮತ್ತು ಮುಖ್ಯಾಧಿಕಾರಿ ಸರ್ಕಾರದ ಸೌಲಭ್ಯವನ್ನು ಜನಸಾಮಾನ್ಯರಿಗೆ ಒದಗಿಸಿಕೊಡದೇ ವಂಚಿಸಲು ಯತ್ನಿಸಿದ್ದಾರೆ. ಈ ಕುರಿತಂತೆ ಸಂಬಂಧಪಟ್ಟವರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.