ಬಳ್ಳಾರಿ

ಇಂದು ಕಾನೂನು ಅರಿವು ಕಾರ್ಯಕ್ರಮ

Published On :

ಹೊಸಪೇಟೆ:ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಮಕ್ಕಳ ದಿನಾಚಾರಣೆ ಕಾರ್ಯಕ್ರಮದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನ. 15ರಂದು ಬೆಳಗ್ಗೆ 9ಕ್ಕೆ ನಡೆಯಲಿದೆ.
ಇಲ್ಲಿನ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಬಿಇಒ ಪಿ. ಸುನಂದಾ ಅಧ್ಯಕ್ಷತೆ ವಹಿಸುವರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮಾರುತಿ ಎಸ್ ಬಾಗಡೆ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಕೆ. ನಾರಾಯಣ ಪ್ರಸಾದ್, ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಹತ್ತಿಕಾಳ ಪ್ರಭುಸಿದ್ದಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ. ರತ್ನಾಕರ್ ರಾವ್, ಕಾರ್ಯದರ್ಶಿ ಕೊಟ್ರೇಶ್ ಹಿರೇಮಠ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯಗುರು ಕಂಪ್ಲಿ ಚಂದ್ರಪ್ಪ ಭಾಗವಹಿಸುವರು. ವಕೀಲ ಎಸ್.ಪಿ. ಶ್ವೇತಾಂಬರಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಇಂದು ಕಾರ್ಯಾಗಾರ ಬಳ್ಳಾರಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನ. 15ರಂದು ಬೆಳಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ ಹಾಗೂ ಶಿಕ್ಷಣ ಹಕ್ಕು ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್ ಕಾರ್ಯಾಗಾರ ಉದ್ಘಾಟಿಸಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಒ ಎಂ. ಮಂಜುನಾಥ ನಾಯಕ್, ಎಸ್ಪಿ ಡಾ. ಚೇತನ್‌ಸಿಂಗ್ ರಾಥೋಡ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪಟೇಲ್ ಸಿದ್ದಾರೆಡ್ಡಿ ಅವರು ಮಕ್ಕಳ ನ್ಯಾಯ ಪೋಷಣೆ ಮತ್ತು ರಕ್ಷಣೆ ಕಾಯ್ದೆ ಕುರಿತು, ಮಕ್ಕಳ ಮಾನಸಿಕ ತಜ್ಞ ಡಾ. ಕೊಟ್ರೇಶ್ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ 2013 ಕಾಯ್ದೆಯಲ್ಲಿ ಶಿಕ್ಷಕರ ಪಾತ್ರ ಕುರಿತು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪೀರ್ ಮಹಮ್ಮದ್ ಅವರು ಮಕ್ಕಳ ಹಕ್ಕುಗಳ ಅನುಷ್ಠಾನದಲ್ಲಿ ಶಿಕ್ಷಕರ ಮತ್ತು ಇತರೆ ಇಲಾಖೆಗಳ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಂ.ಎಚ್. ಶಾಂತಾ, ವಕೀಲರ ಸಂಘದ ಕಾರ್ಯದರ್ಶಿ ಡಿ. ರಾಮಕೃಷ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.