ನರೇಂದ್ರ ಮೋದಿ ಪಿಎಂ ಶತಸ್ಸಿದ್ಧ: ಅನಂತ್ ವಿಶ್ವಾಸ
ಹೊಸಪೇಟೆ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂಬ ಘೋಷಣೆ ಕೇಳಿ ದೇಶದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ. ಮೋದಿ ಅವರು ಪ್ರಧಾನಿಯಾಗುವುದು ಖಚಿತ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಬಿಜೆಪಿ ಏರ್ಪಡಿಸಿದ್ದ ಬೃಹತ್ ಬೈಕ್ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ನ. 17ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೋದಿಯವರ ಸಮಾವೇಶವನ್ನು ಯಶಸ್ವಿಗೊಳಿಸಲು ತಾಲೂಕು ಘಟಕ ಶ್ರಮಿಸಬೇಕು. ಆ ಮೂಲಕ ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದರು.
ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪಂತರ್ ಜಯಂತ್, ಬಿಜೆಪಿ ತಾಲೂಕು ಅಧ್ಯಕ್ಷ ವಿನಾಯಕ ಸ್ವಾಮಿ, ಮುಖಂಡರಾದ ಸಂದೀಪ್ ಸಿಂಗ್, ಯುವ ಮೋರ್ಚಾದ ರಾಜಶೇಖರ್, ನಗರ ಘಟಕ ಅಧ್ಯಕ್ಷ ಹನುಮೇಶ್ ಗುಜ್ಜಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಗೋವಿಂದರಾಜ, ನಗರಸಭಾ ಸದಸ್ಯರಾದ ಚಂದ್ರಕಾಂತ್ ಕಾಮತ್, ರೂಪೇಶ್ ಕುಮಾರ್, ರಾಮಕೃಷ್ಣ, ಬಸವರಾಜ ನಲತ್ವಾಡ, ಜಯತೀರ್ಥ, ತಾಜ್ಪಾಲ್ ಜೈನ್, ಪ್ರಮೋದ್ ಲಲವಾನಿ, ದಿನೇಶ್ ಪಾಟೇಲ್, ಶೆಕ್ಷಾವಲಿ ಬೈಕ್ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಟಿ.ಬಿ. ಡ್ಯಾಂನಿಂದ ಬೈಕ್ರ್ಯಾಲಿ ಆರಂಭಗೊಂಡು ಸಾಯಿಬಾಬ ವೃತ್ತ, ಎಪಿಎಂಸಿ ರಸ್ತೆ, ವಾಲ್ಮೀಕಿ ವೃತ್ತ, ರಾಜ ಮಾದಕರಿ ನಾಯಕ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ರಸ್ತೆ, ರೋಟರಿ ವೃತ್ತ ಸೇರಿದಂತೆ ಇತರೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

