ಬಳ್ಳಾರಿ

ವಜ್ರಾಲ್ ಕುಟುಂಬದವರ ಮೇಲೆ ಹಲ್ಲೆ: ದೂರು

Published On :

ಕೊಟ್ಟೂರು: ರಾಜ್ಯದೆಲ್ಲೆಡೆ ನಕಲಿ ಗೋಲ್ಡ್ ಬಿಸ್ಕೆಟ್ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಮಧ್ಯವರ್ತಿಗಳ ಹಾವಳಿ ಕುರಿತು ಇತ್ತೀಚೆಗೆ ಬಹಿರಂಗಪಡಿಸಿದ್ದ ಸಮೀಪದ ಬತ್ತನಹಳ್ಳಿ ಗ್ರಾಮದ ಗುರುಸ್ವಾಮಿ ವಜ್ರಾಲ್ ಕುಟುಂಬದವರ ಮೇಲೆ ಅದೇ ಗ್ರಾಮದ ಮಧ್ಯವರ್ತಿಗಳು ಸೇರಿ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಗೋಲ್ಡ್ ಬಿಸ್ಕೆಟ್ ದಂಧೆಯಲ್ಲಿ ಪಾಲ್ಗೊಂಡವರ ವಿವರಗಳನ್ನು ಬಹಿರಂಗಪಡಿಸಿದ ಗುರುಸ್ವಾಮಿ ವಜ್ರಾಲ್ ಮೇಲೆ ಸೇಡು ತೀರಿಸಿಕೊಳ್ಳುವ ಕಾರಣಕ್ಕಾಗಿ ಮಧ್ಯವರ್ತಿಗಳ ಬೆಂಬಲಿಗರ ಗುಂಪೊಂದು ಎರಡು ದಿನಗಳ ಹಿಂದೆ ಗ್ರಾಮದಲ್ಲಿನ ಗುರುಸ್ವಾಮಿ ಮನೆ ಮೇಲೆ ದಾಳಿ ನಡೆಸಿದ್ದರು. ರಾಮಪ್ಪ ಎಂಬಾತ ಪವಿತ್ರಾ ಎಂಬುವವರ ಮೇಲೆ ಹಲ್ಲೆ ಮಾಡಿದ್ದು, ಈ ಸಂಬಂಧ ದಾಳಿಗೊಳಗಾದ ಪವಿತ್ರಾ ಪೊಲೀಸ್ ಠಾಣೆಯಲ್ಲಿ ಮಹೇಶ, ರಾಮಪ್ಪ, ರತ್ನಮ್ಮ, ಕೊಟ್ರಮ್ಮ ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಪ್ರತಿಯಾಗಿ ಮಹೇಶ್ ಪವಿತ್ರಾ, ಅಂಜಿನಪ್ಪ, ರತ್ನಕ್ಕ, ವಿಜಯ ಎಂಬುವವರ ವಿರುದ್ಧ ಪ್ರತಿ ದೂರನ್ನು ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಗುರುರಾಜ್ ಮೈಲಾರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.