ಬಳ್ಳಾರಿ

ಸುದ್ದಿ ಸಂಕ್ಷೇಪ

Published On :

ಇಂದು ಪೈಕಾ ಕ್ರೀಡಾಕೂಟ
ಬಳ್ಳಾರಿ: ಜಿಲ್ಲಾ ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟ ನ. 20ರಂದು ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ. ತಾಲೂಕು ಮಟ್ಟದ ಪೈಕಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ಗುಂಪು ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಕನಕ ಜಯಂತಿ
ಬಳ್ಳಾರಿ: ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನ. 20ರಂದು ಬುಧವಾರ ಬೆಳಗ್ಗೆ 11.30ಕ್ಕೆ ಭಕ್ತಶ್ರೇಷ್ಠ ಕನಕದಾಸ ಜಯಂತಿ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಕನಕದಾಸರ ಭಾವಚಿತ್ರಕ್ಕೆ ಪೂಜೆ ಹಾಗೂ ಕಾರ್ಯಕ್ರಮ ಉದ್ಘಾಟಿಸುವರು. ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಶ್ರೀ ಕನಕದಾಸರ ಪುತ್ಥಳಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯು ದುರ್ಗಮ್ಮ ಗುಡಿ, ಬೆಂಗಳೂರು ರಸ್ತೆ, ತೇರುಬೀದಿ, ಮೋತಿ ವೃತ್ತದ ಮೂಲಕ ರಂಗಮಂದಿರದವರೆಗೆ ಸಂಚರಿಸಲಿದೆ. ಶಾಸಕ ಅನಿಲ್ ಲಾಡ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಸಂಸದೆ ಜೆ. ಶಾಂತಾ, ಶಾಸಕ ಬಿ. ಶ್ರೀರಾಮುಲು, ಈ. ತುಕಾರಾಂ, ಭೀಮಾನಾಯ್ಕ, ಬಿ.ಎಂ. ನಾಗರಾಜ,  ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್ ಭಾಗವಹಿಸುವರು. ಸಂತ ಜೋಸೆಫ್ ಬಾಲಕಿಯರ ಪ್ರೌಢಶಾಲೆ ಅಧ್ಯಾಪಕ ಕೆ.ಬಿ. ಸಿದ್ಧಲಿಂಗಪ್ಪ ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆ. ದೊಡ್ಡಬಸವ ಗವಾಯಿ ಅವರು ಕನಕದಾಸರ ಕೀರ್ತನೆಗಳ ಗಾಯನ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಎಸ್ಪಿ ಡಾ. ಚೇತನ್‌ಸಿಂಗ್ ರಾಥೋಡ್, ಜಿಪಂ ಸಿಇಒ ಮಂಜುನಾಥ ನಾಯಕ್, ಪಾಲಿಕೆ ಆಯುಕ್ತ ಚಿಕ್ಕಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿದ್ಯುತ್ ಬಾಕಿ ಪಾವತಿಸಿ
ಹೊಸಪೇಟೆ: ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವವರು ಬಾಕಿ ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಬೇಕು. ಬಾಕಿ ವಸೂಲಿಗಾಗಿ ವಿದ್ಯುತ್ ಕಡಿತಗೊಳಿಸಿದಾಗ್ಯೂ ಬಾಕಿ ಕಟ್ಟದೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಮಾಡಿಕೊಳ್ಳುತ್ತಿರುವುದರಿಂದ ಶಿಸ್ತಿನ ಕ್ರಮವಾಗಿ ವಿಜಿಲೆನ್ಸ್ ಪೊಲೀಸ್ ಇಲಾಖೆಯಿಂದ ತಪಾಸಣೆ ಮಾಡಿಸಿ ತಪ್ಪಿತಸ್ಥರು ಸಿಕ್ಕಿಬಿದ್ದಲ್ಲಿ ಭಾರತೀಯ ವಿದ್ಯುತ್ ನಿಯಮಾವಳಿ ಅನುಸಾರ ರು. 50 ಸಾವಿರ ದಂಡ ಹಾಗೂ ಜೈಲುವಾಸದ ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಗ್ರಾಹಕರು ಬಾಕಿ ಕಟ್ಟಿ, ಉತ್ತಮ ಸೇವೆ ಒದಗಿಸಲು ಜೆಸ್ಕಾಂ ಕಂಪನಿಗೆ ಸಹಕರಿಸಬೇಕು ಎಂದು ಜೆಸ್ಕಾಂ ಇಇ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.