ಬಳ್ಳಾರಿ

ಅಂತರ್ಜಾಲ ಸದ್ಬಳಕೆ ಮಾಡಿಕೊಳ್ಳಿ

Published On :

ಬಳ್ಳಾರಿ: ವಿದ್ಯಾರ್ಥಿಗಳು ಅಂತರ್ಜಾಲದ ಬಗ್ಗೆ ಅರಿತು, ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಜ್ಞಾನಾರ್ಜನೆ ಪಡೆಯಬೇಕು ಎಂದು ಡಿಡಿಪಿಐ ಟಿ. ನಾರಾಯಣಗೌಡ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯು ಬಿಡಿಎಎ ಮೈದಾನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದಲ್ಲಿ ಅಂತರ್ಜಾಲ ಪ್ರಪಂಚ ವೇಗವಾಗಿ ಹಬ್ಬುತ್ತಿದೆ. ಜಿಲ್ಲೆಯು ಈ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಾಗಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ವಹಿಸಿ ಪರಿಣಿತಿ ಪಡೆಯಬೇಕು. ಇದಕ್ಕೆ ಪೋಷಕರು ಪೂರಕ ವಾತಾವರಣ ಕಲ್ಪಿಸಬೇಕು. ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲು 171 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 124 ಶಿಕ್ಷಕರನ್ನು ನಿಯೋಜಿಸಲಾಗಿದ್ದು, 43,263 ವಿದ್ಯಾರ್ಥಿಗಳು ಇದರೆ ಪ್ರಯೋಜನ ಪಡೆಲಿದ್ದಾರೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು ಭಾವಿಹಳ್ಳಿ ಮಾತನಾಡಿ, ಇಂದಿನ ಸ್ಪರ್ಧಾ ಕಾಲದಲ್ಲಿ ಇಂಟರ್‌ನೆಟ್ ಬಳಕೆ ಅನಿವಾರ್ಯವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ. ಮಲ್ಲೇಶ್ ಮಾತನಾಡಿ, ವಿದ್ಯಾರ್ಥಿ ದಿಸೆಯಲ್ಲಿ ಇಂಟರ್‌ನೆಟ್ ಕಲಿಕೆಯುವುದು ಮಹತ್ವದ್ದಾಗಿರುತ್ತದೆ. ಪಠ್ಯ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ ಎಂದರು. ಶಿಕ್ಷಣಾಧಿಕಾರಿ ಎ.ಜೆ. ಆಂಟೋನಿ ಪ್ರಾಸ್ತಾವಿಕ ಮಾತನಾಡಿದರು.
ಪರಿಶಿಷ್ಟ ಜಾತಿ, ಪಂಗಡ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ. ಹನುಂಮತಪ್ಪ, ಬಿಇಒ ಜಿ.ಎಂ. ವೃಷಭೇಂದ್ರಯ್ಯ, ಸಿಂಗಪ್ಪ, ಶಿವಶಂಕರ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಜಂಬಣ್ಣ, ವೀರಭದ್ರಪ್ಪ, ರಾಮಸ್ವಾಮಿ, ಶಿವಶಂಕರಪ್ಪ ಉಪಸ್ಥಿತರಿದ್ದರು. ವಿಷಯ ಪರಿವೀಕ್ಷಕ ಪುಟ್ಟಯ್ಯ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಇ. ಸೋಮಶೇಖರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.