ಕಚೇರಿಗೆ ಜಾಗ ಪಡೆಯಲು ನಿರ್ಣಯ
ಬಳ್ಳಾರಿ: ರಾಜೀವ್ ಗಾಂಧಿ ಟ್ರಸ್ಟ್ಗೆ ಸೇರಿದ ಜಾಗವನ್ನು ಕಾಂಗ್ರೆಸ್ ಮುಖಂಡ ಕೆ.ಸಿ. ಕೊಂಡಯ್ಯ ಅವರಿಂದ ಪಕ್ಷದ ಕಚೇರಿಗೆ ಪಡೆಯಲು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಸಮಿತಿಯ ಈ ನಿರ್ಣಯವನ್ನು ಕೆಪಿಸಿಸಿ ಅಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ತಿಳಿಸಲು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆಂಜನೇಯಲು ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿದ್ದು, ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ. 13ರಂದು ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿದ ಪ್ರಕಾರ ಟ್ರಸ್ಟ್ಗೆ ಸಂಬಂಧಿಸಿದ ದಾಖಲೆಗಳು ಇದ್ದರೆ 7 ದಿನಗಳ ಒಳಗಾಗಿ ನೀಡುವಂತೆ ತಿಳಿಸಲಾಗಿತ್ತು. ಇನ್ನು ದಾಖಲೆಗಳ ಪ್ರಕಾರ ನಿವೇಶನ ಟ್ರಸ್ಟ್ಗೆ ಸೇರಿದ್ದಾಗಿದೆ. ಒಂದು ವೇಳೆ ಕಾನೂನು ಪ್ರಕಾರ ನಿವೇಶನ ಕೊಂಡಯ್ಯ ಅವರಿಗೆ ಸೇರಿದರೂ, ಅವರು ಪಕ್ಷದ ಹಿರಿಯ ಮುಖಂಡರಾಗಿರುವುದರಿಂದ ಅದನ್ನು ಪಕ್ಷದ ಕಚೇರಿಗೆ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ, ಜಾಗವನ್ನು ಪಕ್ಷಕ್ಕೆ ಉಳಿಸಿಕೊಳ್ಳುವಂತೆ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಬುಧವಾರ ಪಕ್ಷದ ಜಿಲ್ಲಾಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಮುಂದೆ ಸಚಿವರಾಗಲಿ, ಶಾಸಕರಾಗಲಿ, ನಾಮನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡುವಾಗ ಬೇರೊಂದು ಪಕ್ಷದಿಂದ ಕಾಂಗ್ರೆಸ್ಗೆ ಬಂದವರನ್ನು ಆಯ್ಕೆ ಮಾಡಬಾರದು. ಕಾಂಗ್ರೆಸ್ ಸಮಿತಿಯಲ್ಲಿ ನಿರ್ಧಾರ ತೆಗೆದುಕೊಂಡಿರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

