ಬಳ್ಳಾರಿ

ಗ್ರಾಪಂಗೊಂದು ಆಟದ ಮೈದಾನ

Published On :

ಬಳ್ಳಾರಿ: ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗೊಂದು ಆಟದ ಮೈದಾನ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗ್ರಾಮೀಣ (ಪೈಕಾ) ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಂದು ಕ್ರೀಡಾ ಮೈದಾನ ನಿರ್ಮಾಣ ಯೋಜನೆಯನ್ನು ಈಗಾಗಲೆ ಪ್ರಾರಂಭಿಸಲಾಗಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ದೈಹಿಕ ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಕ್ರೀಡಾ ಮೀಸಲಾತಿಯಡಿ ನೇಮಕಾತಿ ಮಾಡಿಕೊಳ್ಳಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಅವಕಾಶಗಳಿರುವ ಹಿನ್ನೆಲೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಉದ್ಯೋಗದ ಜತೆಗೆ ಸದೃಢತೆಯೂ ಬರುತ್ತದೆ. ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸಬೇಕು. ಕ್ರೀಡಾ ಚಟುವಟಿಕೆಗಳಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬಲ್ಲರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಕ್ರೀಡಾಜ್ಯೋತಿ ಸ್ವೀಕರಿಸಿದರು. ಜಿಪಂ ಸಿಇಒ ಮಂಜುನಾಥ ನಾಯಕ್, ಸಹಾಯಕ ಆಯುಕ್ತ ಅನಿರುದ್ಧ ಶ್ರವಣ್, ಪಾಲಿಕೆ ಸದಸ್ಯ ಬೆಣಕಲ್ ಬಸವರಾಜ, ಕೆರೆಕೋಡಪ್ಪ, ತಹಸೀಲ್ದಾರ್ ಶರಣಪ್ಪ, ರಾಮಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಸ್ವಾಗತಿಸಿದರು. ಮಲಕಪ್ಪ ವಂದಿಸಿದರು. ಎಲ್ಲ ತಾಲೂಕುಗಳಿಂದ 620 ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.