ಮಹಿಳಾ ಆರ್ಥಿಕ ಸಬಲೀಕರಣಕ್ಕೆ ತರಬೇತಿ: ಪರಮೇಶ್ವರ ನಾಯ್ಕ
ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ನ. 21
ಸ್ವಸಹಾಯ ಸಂಘಗಳನ್ನು ರಚನೆ ಮಾಡಿ, ಅವರ ವೃತ್ತಿಗೆ ತಕ್ಕಂತೆ ತರಬೇತಿ ಪಡೆದು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದರು.
ಜಿಪಂ, ಜಲಾನಯನ ಅಭಿವೃದ್ಧಿ ಇಲಾಖೆ, ಸುರಭಿ ಸಮಗ್ರ ಮಾನವ ಕಲ್ಯಾಣಾಭಿವೃದ್ಧಿ ಸಂಸ್ಥೆ ಕೂಡ್ಲಿಗಿ ಇವರ ಸಹಯೋಗದಲ್ಲಿ ಸಮಗ್ರ ಜಲಾನಯನ ನಿರ್ವಹಣೆ ಯೋಜನೆಯ ಹಿರೇಹಡಗಲಿ, ಕೆ. ವೀರಾಪುರ ಉಪ ಜಲಾನಯನ ವ್ಯಾಪ್ತಿಯ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಸಬಲರಾಗಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಎನ್ಜಿಒಗಳ ಮೂಲಕ ಕೌಶಲ್ಯಾಧಾರಿತ ತರಬೇತಿ ಪಡೆದು ಮೇಣದಬತ್ತಿ, ಊದಬತ್ತಿ ಸೇರಿದಂತೆ ಸುಮಾರು 80 ಬಗೆಯ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವುದರಿಂದ ಸಾಕಷ್ಟು ಲಾಭ ಗಳಿಸಬಹುದು. ಇಲ್ಲಿ ಪಡೆದ ತರಬೇತಿಯನ್ನು ಅರ್ಧಕ್ಕೆ ನಿಲ್ಲಿಸದೆ ನಿರಂತರವಾಗಿ ನಡೆಸಿಕೊಂಡು ಹೋಗಬೇಕೆಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ್ ಚಿದಾನಂದ, ಎಂ. ಪರಮೇಶ್ವರಪ್ಪ, ಜಿಪಂ ಸದಸ್ಯ ವಸಂತ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರಿವಿ ಪ್ರಕಾಶ, ಎಪಿಎಂಸಿ ಅಧ್ಯಕ್ಷ ವಾರದ ಗೌಸ್ ಮೋಹಿದ್ದೀನ್, ಜಿಲ್ಲಾ ಜಲಾನಯನ ಅಧಿಕಾರಿ ಎಲ್. ಸಿದ್ದೇಶ್ವರ, ಕಾರ್ಮೆಲ್ ಸೇವಾ ಸದನದ ರಾಜೇಶ್ ಡಿಸೋಜಾ, ತಾಲೂಕು ಜಲಾನಯನ ಅಧಿಕಾರಿ ಎಂ. ತವನಪ್ಪ, ಸಹಾಯಕ ಕೃಷಿ ಅಧಿಕಾರಿ ಬಿ. ನಿಂಗಪ್ಪ, ಸುರಭಿ ಸಂಸ್ಥೆಯ ಜಿ. ಫಮೇಶ, ಹನುಮಂತಪ್ಪ, ತಾಪಂ ಉಪಾಧ್ಯಕ್ಷೆ ಪ್ರೇಮಾ ಇತರರಿದ್ದರು. ದ್ವಾರಕೇಶ ರೆಡ್ಡಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ತರಬೇತಿ ಪಡೆದ ಮಹಿಳಾ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಪ್ರಶಸ್ತಿ ಪತ್ರಗಳನ್ನು ಸಚಿವರು ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

