ಬೇಡಿಕೆಗಳ ಈಡೇರಿಕೆಗೆ ಧರಣಿ
ಬಳ್ಳಾರಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ಶುಕ್ರವಾರ ದೇಶದ ಎಲ್ಲಾ ಗ್ರಾಮೀಣ ಬ್ಯಾಂಕ್ಗಳ ಎದುರು ಒಂದು ದಿನದ ಪ್ರತಿಭಟನಾ ಧರಣಿಗೆ ಕರೆ ನೀಡಿದ ಹಿನ್ನಲೆಯಲ್ಲಿ, ಪ್ರಗತಿ-ಕೃಷ್ಣಾ ಗ್ರಾಮೀಣ ಬ್ಯಾಂಕ್ನ ನೌಕರರ ಸಂಘ ಮತ್ತು ಅಧಿಕಾರಿಗಳ ಸಂಘ ನಗರದ ಬ್ಯಾಂಕ್ನ ಪ್ರಧಾನ ಕಚೇರಿ ಮುಂದೆ ಧರಣಿ ನಡೆಸಿದರು.
ಪ್ರಗತಿ-ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಗುರುಮೂರ್ತಿ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಬ್ಯಾಂಕ್ನಡಿ ರಾಜ್ಯ ಮಟ್ಟದ ಗ್ರಾಮೀಣ ಬ್ಯಾಂಕ್ಗಳು ಸ್ಥಾಪನೆಯಾಗಬೇಕು. ಪ್ರೇರಕ ಬ್ಯಾಂಕಿನ ಉದ್ಯೋಗಿಗಳಿಗೆ ದೊರೆಯುತ್ತಿರುವ ಎಲ್ಲ ಸೌಲಭ್ಯಗಳನ್ನು ಜಾರಿ ಮಾಡುವ ಜತೆಗೆ ಗ್ರಾಮೀಣ ಬ್ಯಾಂಕಿನಲ್ಲಿ ದುಡಿಯುತ್ತಿರುವ ದಿನಗೂಲಿ ನೌಕರರನ್ನು ಕಾಯಂಗೊಳಿಸಬೇಕೆಂದರು.
ಡಿ. 10 ದೆಹಲಿಯಲ್ಲಿ ಧರಣಿ: ಬ್ಯಾಂಕ್ನ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎ.ಆರ್. ಪರಮೇಶ್ವರಪ್ಪ ಮಾತನಾಡಿ, ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ, ಡಿಸೆಂಬರ್ ಮೊದಲ ವಾರದಲ್ಲಿ, ರಾಜ್ಯ ಒಕ್ಕೂಟದ ಪದಾಧಿಕಾರಿಗಳು ನಬಾರ್ಡ್ ಮತ್ತು ಆರ್ಬಿಐ ಪ್ರಾದೇಶಿಕ ಕಚೇರಿಗಳ ಅಧಿಕಾರಿಗಳನ್ನು ಮತ್ತು ಪ್ರೇರಕ ಬ್ಯಾಂಕ್ನ ಅಧ್ಯಕ್ಷರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು. ಡಿಸೆಂಬರ್ 10ರಂದು ದೆಹಲಿಯ ಜಂತರ್ಮಂತರ್ನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದ್ದು, ಅಂದು ದೇಶದ ಎರಡು ಸಾವಿರಕ್ಕೂ ಹೆಚ್ಚು ಗ್ರಾಮೀಣ ಬ್ಯಾಂಕಿನ ಉದ್ಯೋಗಿಗಳು ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಫಲವಾದಲ್ಲಿ ಮುಂದಿನ ಮಾರ್ಚ್ ನಲ್ಲಿ ಸಂಪೂರ್ಣ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಪ್ರತಿಭಟನಾ ಧರಣಿಯಲ್ಲಿ ಜಂಟಿ ವೇದಿಕೆ ಸಂಚಾಲಕ ಗಣಪತಿ ಹೆಗಡೆ ಸೇರಿ ಎರಡು ಸಂಘಗಳ ನೂರಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

