ಬಳ್ಳಾರಿ

ರು. 10 ಕೋಟಿ ವೆಚ್ಚದ ಕೆರೆ ನಿರ್ಮಾಣ: ಶ್ರೀರಾಮುಲು

Published On :

ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಮತ್ತು ಸಿರಿವಾರ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಕೊರತೆ ನೀಗಿಸಲು ಸರ್ಕಾರದಿಂದ ರು. 10 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರ ಟೆಂಡರ್ ಕರೆದು ಕೆರೆ ಕಾಮಗಾರಿ ನಿರ್ಮಾಣಕ್ಕೆ ಕ್ರಮ ಜರುಗಿಸುವುದಾಗಿ ಶಾಸಕ ಬಿ. ಶ್ರೀರಾಮುಲು ಭರವಸೆ ನೀಡಿದರು.
ಶುಕ್ರವಾರ ಕಪ್ಪಗಲ್ಲು ಮತ್ತು ಸಿರಿವಾರ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, 6 ತಿಂಗಳೊಳಗೆ ಕಾಮಗಾರಿ ಕೈಗೆತ್ತಿಕೊಂಡು ಕುಡಿಯುವ ನೀರು ಸಂಗ್ರಹಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು.
ಸಂಗನಕಲ್ಲು ಗ್ರಾಮದಲ್ಲಿ ಸುವರ್ಣ ಗ್ರಾಮ ಯೋಜನೆಯಡಿ ರು. 1.64 ಕೋಟಿ ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿಪೂಜೆ, ಸಿರಿವಾರ ಗ್ರಾಮದಲ್ಲಿ ಸರ್ಕಾರದಿಂದ ನಿರ್ಮಿಸಿದ್ದ ಗಾಪಂ ನೂತನ ಕಟ್ಟಡ ಉದ್ಘಾಟನೆ, ಮೋಕಾದಲ್ಲಿ ರು. 50 ಲಕ್ಷ ವೆಚ್ಚದಲ್ಲಿ ಮಹಿಳೆಯರ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ, ಡಿ. ನಾಗೇನಹಳ್ಳಿಯಲ್ಲಿ ರು. 46 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಭೂಮಿಪೂಜೆ, ಗೊಲ್ಲ ನಾಗೇನಹಳ್ಳಿ ಮತ್ತು ಕಾರೇಕಲ್ಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 3.25 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಗೆ ರು. 1.26 ಕೋಟಿ ಮಂಜೂರಾಗಿದ್ದು, ಕಾಮಗಾರಿಗೆ ಪೂಜೆ ನೆರವೇರಿಸಿದರು. ಬ್ಯಾಲಚಿಂತೆ, ಕಾರೇಕಲ್ಲು ಮತ್ತು ಕೆ. ವೀರಾಪುರ ಗ್ರಾಮಗಳಿಗೂ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಜಿಪಂ ಸದಸ್ಯ ಡಿ. ರಾಮುಡು, ತಾಪಂ ಅಧ್ಯಕ್ಷ ವಿ. ಗಾದಿಲಿಂಗ, ಬಿಎಸ್ಸಾರ್ ಕಾಂಗ್ರೆಸ್ ಮುಖಂಡ ಸತ್ಯನಾರಾಯಣ ರೆಡ್ಡಿ, ಓಬಳೇಶ್, ತಾಪಂ ಇಒ ಕೆ. ಬಸಪ್ಪ, ಜಿಪಂ ಎಇಇ ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.