ಬಳ್ಳಾರಿ

ಕಾನೂನಿನಡಿ ಹೋರಾಡಿ: ಪಾಟೀಲ್

Published On :

ಬಳ್ಳಾರಿ: ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಹೋರಾಟ ಮಾಡಿದಾಗ ಮಾತ್ರ ಸಂಘಟನೆಗಳು ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಪಾಟೀಲ್ ಹೇಳಿದರು.
ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಾಗಲೂರು ಗ್ರಾಮದಲ್ಲಿ ಏರ್ಪಡಿಸಿದ್ದ ಗಡಿನಾಡ ಕನ್ನಡಿಗರ ನಾಡಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಡು, ನುಡಿ, ಗಡಿ, ನೆಲ, ಜಲ, ಸಂಸ್ಕೃತಿ, ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಜನರ ಹಾಗೂ ಮಹಿಳೆಯರ ರಕ್ಷಣೆಯೂ ಒಳಗೊಂಡಂತೆ ನಾಡಿನ ಸರ್ವತೋಮುಖ ಬೆಳವಣಿಗೆಗೆ ಸಂಘಟನೆಗಳು ಶಕ್ತಿ ನೀಡಲಿವೆ. ಹೀಗಾಗಿ ಸಂಘಟನೆಯನ್ನು ವೈಯಕ್ತಿಕ ಕಾರಣಕ್ಕೆ ಬಳಸಿಕೊಳ್ಳದೆ, ಸಾರ್ವಜನಿಕರ ಸಮಸ್ಯೆಗಳ ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳಬೇಕು ಎಂದರು.
ನಂತರ ಗ್ರಾಮದ ಉತ್ತಮ ಶಿಕ್ಷಕರು ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಖೋ ಖೋ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಳ್ಳಾರಿ ವಿಎಸ್‌ಕೆ ವಿವಿ ಕುಲಸಚಿವ ಡಾ.ಕೆ. ವಿಜಯಕುಮಾರ್, ವೇದಿಕೆಯ ರಾಜ್ಯ ಉಪಾಧ್ಯಕ್ಷ ಮಂಜುನಾಥ ಹಾಗರಗಿ, ಬಿ. ಜಯಸಿಂಗ್, ಪ್ರಭುರಾಜ್ ಕೊಡ್ಲೆ, ಗಂಗಾಧರ ಸ್ವಾಮಿ, ಮಲ್ಲಿಕಾರ್ಜುನ ಕೊಡ್ಲೆ, ವೆಂಕಟೇಶ್, ಎಚ್. ರಮೇಶ್ ಗೋನಾಳ, ದರೂರು ಶಾಂತನಗೌಡ, ಕುಂದಾಪುರ ನಾಗರಾಜ್, ಅದ್ದಿಗೇರಿ ರಾಮಣ್ಣ, ಜೆ.ವಿ. ಮಂಜುನಾಥ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.